ಬೆಂಗಳೂರು: ಹುಬ್ಬಳ್ಳಿ ಗಲಭೆ ಪ್ರಕರಣ ವಾಪಸ್ಗೆ ಡಿಸಿಎಂ ಡಿಕೆ ಶಿವಕುಮಾರ್ ಪತ್ರ ಬರೆದ ವಿಚಾರಕ್ಕೆ ಸಂಬಂಧಿಸಿ ಬೆಂಗಳೂರಿನಲ್ಲಿ ಗೃಹ ಇಲಾಖೆ ಸಚಿವ ಡಾ.ಜಿ.ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ. ಸಚಿವರು, ಶಾಸಕರಿಗೆ ಮನವಿ ಸಲ್ಲಿಸಿದರೆ ನಮಗೆ ಕಳುಹಿಸಿಕೊಡುತ್ತಾರೆ. ಆ ಮನವಿ ನನಗೆ ಬರುತ್ತದೆ, ಇಲ್ಲದಿದ್ರೆ ಇಲಾಖೆ ಡಿಜಿಗೆ ಕಳುಹಿಸುತ್ತಾರೆ. ಆಗ ನಾವು ಕ್ಯಾಬಿನೆಟ್ ಸಬ್ ಕಮಿಟಿ ಮುಂದೆ ಚರ್ಚೆ ಮಾಡುತ್ತೇವೆ.
ಏನೇನು ಸೆಕ್ಷನ್ ಹಾಕಿರುತ್ತಾರೆ ಎಲ್ಲವನ್ನೂ ಪರಿಶೀಲನೆ ಮಾಡುತ್ತೇವೆ. ಅಂತಿಮವಾಗಿ ಕೇಸ್ ಹಿಂಪಡೆಯುವ ಬಗ್ಗೆ ಕ್ಯಾಬಿನೆಟ್ʼನಲ್ಲಿ ತೀರ್ಮಾನ ಮಾಡುತ್ತೆ. ಪತ್ರ ಬರೆದರು ಎಂದು ಬೊಬ್ಬೆ ಹೊಡೆದರೆ ನಾವು ಏನು ಮಾಡಬೇಕು. ನಾನು ಇನ್ನೂ ಪತ್ರ ನೋಡಿಲ್ಲ, ಒಂದು ವೇಳೆ ಪತ್ರ ಬರೆದ್ರೂ ತಪ್ಪಿಲ್ಲ ಎಂದು ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು.