ವಿಶೇಷ ಸ್ಥಾನಮಾನ ರದ್ದು: ಕೇಂದ್ರದ ಆದೇಶ ಎತ್ತಿ ಹಿಡಿದ ಸುಪ್ರೀಂ ಕೋರ್ಟ್

ನವದೆಹಲಿ: ಜಮ್ಮು ಮತ್ತು ಕಾಶ್ಮೀರಕ್ಕೆ ಸಂವಿಧಾನದ 370ನೇ ವಿಧಿಯ ಅಡಿ ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು ರದ್ದು ಪಡಿಸಿದ ಕೇಂದ್ರ ಸರ್ಕಾರ ನಿರ್ಧಾರ ಸರಿಯಾಗಿದೆ ಎಂದು ಸುಪ್ರೀಂಕೋರ್ಟ್ ಐತಿಹಾಸಿಕ ತೀರ್ಪು ನೀಡಿದೆ. ಅಷ್ಟೇ ಅಲ್ಲದೇ 2024ರ ಸೆಪ್ಟೆಂಬರ್ 30ರ ಒಳಗಡೆ ಒಳಗಡೆ ವಿಧಾನಸಭಾ ಚುನಾವಣೆ ನಡೆಸಬೇಕೆಂದು ಚುನಾವಣಾ ಆಯೋಗಕ್ಕೆ ಸೂಚಿಸಿದೆ.

ವಿಶೇಷ ಸ್ಥಾನವನ್ನು ರದ್ದು ಪಡಿಸಿದ ಕೇಂದ್ರ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿ ವಿಚಾರಣೆ ಮುಕ್ತಾಯಗೊಳಿಸಿದ್ದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿಗಳಾದ ಸಂಜಯ್ ಕಿಶನ್ ಕೌಲ್, ಸಂಜೀವ್ ಖನ್ನಾ, ಬಿಆರ್ ಗವಾಯಿ ಮತ್ತು ಸೂರ್ಯಕಾಂತ್ ಅವರನ್ನೊಳಗೊಂಡ ಐದು ನ್ಯಾಯಾಧೀಶರ ಸಂವಿಧಾನ ಪೀಠದಿಂದ ಸರ್ವಾನುಮತದ ತೀರ್ಪು ಪ್ರಕಟವಾಗಿದೆ.

ತೀರ್ಪು ಓದಿದ ಸಿಜೆಐ ಚಂದ್ರಚೂಡ್ ಅವರು, ಜಮ್ಮು ಕಾಶ್ಮೀರಕ್ಕೆ ನೀಡಲಾದ ವಿಶೇಷ ಸ್ಥಾನಮಾನ ತಾತ್ಕಾಲಿಕ. ಭಾರತದ ಸಂವಿಧಾನದ 1 ಮತ್ತು 370 ನೇ ವಿಧಿಗಳಿಂದ ಸ್ಪಷ್ಟವಾದಂತೆ ಜಮ್ಮು ಮತ್ತು ಕಾಶ್ಮೀರವು ಭಾರತದ ಅವಿಭಾಜ್ಯ ಅಂಗವಾಗಿದೆ. ರಾಜ್ಯದಲ್ಲಿನ ಯುದ್ಧದ ಪರಿಸ್ಥಿತಿಯಿಂದಾಗಿ ಆರ್ಟಿಕಲ್ 370 ವಿಧಿಸಿದ್ದು ಮಧ್ಯಂತರ ವ್ಯವಸ್ಥೆಯಾಗಿದೆ. ರಾಷ್ಟ್ರಪತಿಗಳು ರದ್ದು ಪಡಿಸಿದ ಆದೇಶ ಸರಿಯಾಗಿದೆ ಎಂದು ಆದೇಶದಲ್ಲಿ ತಿಳಿಸಿದ್ದಾರೆ.

Loading

Leave a Reply

Your email address will not be published. Required fields are marked *