ಬೆಳಗಾವಿ: ಎಲ್ಲರಿಗೂ ಗ್ಯಾರಂಟಿ ಕೊಡಲು ಸಾಧ್ಯವಿಲ್ಲ ಅಂತ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಅವರು ಜಿಲ್ಲೆಯ ಕಿತ್ತೂರು ತಾಲೂಕಿನ ಬೈಲೂರು ಗ್ರಾಮದಲ್ಲಿ ಮಾತನಾಡುತ್ತ ಈ ಬಗ್ಗೆ ತಿಳಿಸಿದರು. ಇದೇ ವೇಳೆ ಅವದರು ನಿರ್ಗತಿಕರು, ಬಡವರು ಯಾರಿದ್ದಾರೆ ಅವರನ್ನು ಗುರುತಿಸಿ ಗ್ಯಾರಂಟಿ ಯೋಜನೆ ತಲುಪಿಸುತ್ತೇವೆ ಎಂದು ತಿಳಿಸಿದರು.
ಇನ್ನೂ ಇದೇ ವೇಳೆ ಅವರು ನಾವು ಗ್ಯಾರಂಟಿ ಈಡೇರಿಸಲು ಸಿದ್ಧರಿದ್ದೇವೆ. ಆದರೆ ಪ್ರತಿಪಕ್ಷಗಳು ಗೊಂದಲ ಸೃಷ್ಟಿಸುತ್ತಿವೆ. ಗ್ಯಾರಂಟಿ ನೀಡಿದ್ದು ನಾವು, ಅವರಲ್ಲ. ಗ್ಯಾರಂಟಿ ಯೋಜನೆ ಈಡೇರಿಸಲು ಸಮಯ ಬೇಕು. ಯೋಜನೆ ಜಾರಿಗಾಗಿ ಈಗಾಗಲೇ ಸಿದ್ಧತೆ ನಡೆದಿವೆ. ನಾವು ಜಾರಿಗೊಳಿಸುತ್ತೇವೆ ಅಂತ ತಿಳಿಸಿದರು.