ಬೆಂಗಳೂರು : ಭೀಕರ ಅಪಘಾತದಲ್ಲಿ ಇಬ್ಬರು ವಿದ್ಯಾರ್ಥಿನಿಯರು ಹಾಗೂ ಶಿಕ್ಷಕಿ ಗಾಯಗೊಂಡ ಘಟನೆ ಮಹಾರಾಣಿ ಕ್ಲಸ್ಟರ್ ಕಾಲೇಜು ಆವರಣದಲ್ಲಿ ನಡೆದಿದೆ. ಇಂಗ್ಲೀಷ್ ಪ್ರೊಫೆಸರ್ ಓರ್ವರ ಕಾರು ವೇಗವಾಗಿ ಬಂದು ಇಬ್ಬರು ವಿದ್ಯಾರ್ಥಿನಿಯರು ಮತ್ತು ಮ್ಯೂಸಿಕ್ ಟೀಚರ್‌ಗೆ ಡಿಕ್ಕಿಯಾಗಿದೆ. ಘಟನೆಯಲ್ಲಿ ಬಿಕಾಂ ವಿದ್ಯಾರ್ಥಿನಿ ಅಶ್ವಿನಿ,
ಹಾಗೂ ಮತ್ತೋರ್ವ ವಿದ್ಯಾರ್ಥಿನಿಗೆ ಗಂಭೀರ ಗಾಯಗಳಾಗಿವೆ. ಹಾಗೂ ಮ್ಯೂಸಿಕ್ ಟೀಚರ್ ಜ್ಯೋತಿ ಎಂಬುವವರಿಗೂ ಗಾಯಗಳಾಗಿವೆ.ಕ್ಯಾಂಪಸ್ ಆವರಣದಲ್ಲಿ ಅತಿಯಾದ ವೇಗವಾಗಿ ಕಾರು ಚಲಾಯಿಸಿದ್ದರಿಂದ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿದೆ ಎನ್ನಲಾಗಿದ್ದು, ಗಾಯಾಳುಗಳನ್ನ ಆಸ್ಪತ್ರೆಗೆ ದಾಖಲಿಸಲಾಗಿದೆ.