ಮಂಡ್ಯ: ತಾಲೂಕಿನ ತಿಬ್ಬನಹಳ್ಳಿ ಸಮೀಪ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ವಿಸಿ ನಾಲೆಗೆ ಬಿದ್ದು, ಚಾಲಕ ಲೋಕೇಶ್ ಎಂಬಾತ ನಾಪತ್ತೆಯಾಗಿದ್ದ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ವಿಸಿ ನಾಲೆಯಲ್ಲಿ ಚಾಲಕ ಲೋಕೇಶ್ (Dead body found) ಮೃತದೇಹ ಪತ್ತೆಯಾಗಿದೆ. ಇನ್ನು ನಿನ್ನೆ ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿಯವರು ಕಾರನ್ನ ಮೇಲಕ್ಕೆ ಎತ್ತಿದ್ದರು.
ಬಳಿಕ ಕಾರಿನಲ್ಲಿ ಮತ್ತೆ ಯಾರಾದರೂ ಇದ್ದರಾ? ಎಂಬ ಅನುಮಾನ ಮೂಡಿತ್ತು. ಇನ್ನು ಲೊಕೇಶ್ ಈಜು ಬಾರದೇ ನೀರಿನಲ್ಲಿ ಕೊಚ್ಚಿ ಹೋಗಿರುವ ಶಂಕೆ ವ್ಯಕ್ತವಾದ ಹಿನ್ನಲೆ ಅಗ್ನಿಶಾಮಕ ದಳದ ಸಿಬ್ಬಂದಿ ಶೋಧಕಾರ್ಯ ಆರಂಭಿಸಿದ್ದರು. ಆದರೆ, ಇಂದು ಬೆಳಿಗ್ಗೆ ಅಪಘಾತ ನಡೆದ ಸ್ಥಳದಿಂದ ಒಂದು ಕಿಲೋಮೀಟರ್ ದೂರದಲ್ಲಿ ಮೃತ ದೇಹ ಪತ್ತೆಯಾಗಿದೆ. ಕೆಲವು ದಿನಗಳ ಹಿಂದೆ ಮಾತ್ರ ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳು ವಿಸಿ ನಾಲೆಗೆ ನೀರು ಬಿಟ್ಟಿದ್ದರು.