ಲಕ್ನೋ: ಎಸ್ಯುವಿ ಕಾರು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕಾರು ಕಂದಕಕ್ಕೆ ಉರುಳಿ ಬಿದ್ದಿದ್ದು, ಇಬ್ಬರು ಮಕ್ಕಳು ಸೇರಿದಂತೆ 6 ಮಂದಿ ನೇಪಾಳಿ ಪ್ರಜೆಗಳು ಸಾವನ್ನಪ್ಪಿದ ಘಟನೆ ಉತ್ತರ ಪ್ರದೇಶದ ಶ್ರಾವಸ್ತಿ ಜಿಲ್ಲೆಯಲ್ಲಿ ನಡೆದಿದೆ.
ಎಸ್ಯು ಕಾರು ಚಾಲಕ ರಸ್ತೆಯಲ್ಲಿದ್ದ ಜಾನುವಾರುಗಳಿಗೆ ಅಪಘಾತ ತಪ್ಪಿಸಲು ಹೋಗಿ ಕಾರು ಮರಕ್ಕೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಮೃತಪಟ್ಟವರು ನೇಪಾಳದ ನೇಪಾಳಗಂಜ್ ನಗರದ ತ್ರಿಭುವನ್ ಚೌಕ್ ಪ್ರದೇಶದ ನಿವಾಸಿಗಳು ಎಂದು ತಿಳಿದುಬಂದಿದೆ.
ಮೃತರನ್ನು ನಿಲಾಂಶ್ (36), ನೀತಿ (20), ದೀಪಿಕಾ (35), ವೈಭವ್ ಅಲಿಯಾಸ್ ಸೋನು (36) ಎಂದು ಗುರುತಿಸಲಾಗಿದ್ದು, ಅಪಘಾತದಲ್ಲಿ ಮೃತಪಟ್ಟ ಅಪ್ರಾಪ್ತ ಮಕ್ಕಳ ಗುರುತು ಪತ್ತೆಯಾಗಿಲ್ಲ. ಘಟನೆಯಿಂದ ಕಾರು ಚಾಲಕ ಗಂಭೀರವಾಗಿ ಗಾಯಗೊಂಡಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಬಹ್ರೈಚ್ ವೈದ್ಯಕೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಗಳು ತಿಳಿಸಿವೆ.