ಬೆಂಗಳೂರು:- ನಟ ದರ್ಶನ್ ನಾಯಿ ಮಹಿಳೆಗೆ ಕಚ್ಚಿದ ಪ್ರಕರಣ ಸಂಬಂಧ ಪೊಲೀಸರ ನೋಟಿಸ್ ಗೆ ಇನ್ನೂ ಚಾಲೆಂಜಿಂಗ್ ಸ್ಟಾರ್ ನಟ ದರ್ಶನ್ ಉತ್ತರ ನೀಡಿಲ್ಲ.
ಮೂರು ದಿನಗಳ ಒಳಗಾಗಿ ಉತ್ತರಿಸುವಂತೆ ಪೊಲೀಸರು ನೋಟಿಸ್ ನಲ್ಲಿ ಸೂಚಿಸಿದ್ದರು. ಶುಕ್ರವಾರ ದರ್ಶನ್ ಗೆ ಆರ್ ಆರ್ ನಗರ ಠಾಣೆ ಪೊಲೀಸರು ನೊಟೀಸ್ ನೀಡಿದ್ದರು. ಆದರೆ ನೋಟಿಸ್ ಜಾರಿ ಮಾಡಿ ಮೂರು ದಿನ ಕಳೆದರೂ ನೋಟಿಸ್ ಗೆ ದರ್ಶನ್ ಉತ್ತರಿಸಿಲ್ಲ.
ಹೀಗಾಗಿ ಈ ಬಗ್ಗೆ ಮೇಲಾಧಿಕಾರಿಗಳ ಜೊತೆ ಚರ್ಚಿಸಿ ಮುಂದಿನ ಕ್ರಮಕ್ಕೆ ಪೊಲೀಸರು ಚಿಂತನೆ ನಡೆಸಿದ್ದಾರೆ.