ಬೆಂಗಳೂರು: ಸಿಇಟಿ-2023ರ ಭೌತಶಾಸ್ತ್ರ, ರಾಸಾಯನಶಾಸ್ತ್ರ, ಗಣಿತ ಮತ್ತು ಜೀವಶಾಸ್ತ್ರ ವಿಷಯಗಳಿಗೆ ಸಂಬಂಧಿಸಿದಂತೆ ತಾತ್ಕಾಲಿಕ ಸರಿ ಉತ್ತರಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ತನ್ನ ವೆಬ್ ಸೈಟ್ ನಲ್ಲಿ ಪ್ರಕಟಿಸಿದೆ.
ಈ ಬಗ್ಗೆ ಮಾಹಿತಿ ನೀಡಿರುವಂತ ಕೆಇಎ ಸಹಾಯಕ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್ ರಮ್ಯಾ ಅವರು, ಸಿಇಟಿ ತಾತ್ಕಾಲಿಕ ಕೀ ಉತ್ತರವನ್ನು https://kea.kar.nic.in ಜಾಲತಾಣದಲ್ಲಿ ಪ್ರಕಟಿಸಲಾಗಿದೆ. ಆನ್ ಲೈನ್ ನಲ್ಲಿಯೇ ಪ್ರಕಟಿತ ಕೀ ಉತ್ತರ ಸಂಬಂಧ ಮೇ.30ರ ಬೆಳಿಗ್ಗೆ 11 ಗಂಟೆಯೊಳಗೆ ಆಕ್ಷೇಪಣೆಗಳನ್ನು ಸಲ್ಲಿಸಬಹುದು ಎಂದಿದ್ದಾರೆ.
ವಿದ್ಯಾರ್ಥಿಗಳು ಆಕ್ಷೇಪಣೆಗಳನ್ನು ಸಲ್ಲಿಸುವ ಸಂದರ್ಭದಲ್ಲಿ ವಿಷಯ, ವರ್ಷನ್ ಕೋಡ್, ಪ್ರಶ್ನೆ ಪತ್ರಿಕೆ ಪ್ರಶ್ನೆ, ಸಂಖ್ಯೆ ಗಳ ವಿವರ ಹಾಗೂ ಸಮರ್ಥನೆಯನ್ನು ಪಿಡಿಎಫ್ ರೂಪದಲ್ಲಿ ಸಲ್ಲಿಸಬೇಕು ಎಂದು ತಿಳಿಸಿದ್ದಾರೆ.