ಚಾಮರಾಜನಗರ: ಚಾಮರಾಜನಗರ ಜಿಲ್ಲಾಧಿಕಾರಿ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿ ಆದ್ದರಿಂದ ಚಾಮರಾಜನಗರ ನೂತನ ಜಿಲ್ಲಾಧಿಕಾರಿಯಾಗಿ ಶಿಲ್ಪಾನಾಗ್ ಅಧಿಕಾರ ಸ್ವೀಕಾರ ಮಾಡಿದ್ದಾರೆ. ಚಾಮರಾಜನಗರ ಜಿಲ್ಲಾಧಿಕಾರಿಯಾಗಿದ್ದ ಡಿ.ಎಸ.ರಮೇಶ್ ವರ್ಗಾವಣೆಯಾದ ನಂತರ ತೆರವಾಗಿದ್ದ ಜಿಲ್ಲಾಧಿಕಾರಿ ಸ್ಥಾನಕ್ಕೆ ಶಿಲ್ಪಾನಾಗ್ ಆಯ್ಕೆಯಾಗಿದ್ದು, ಇಂದು ನೂತನ ಜಿಲ್ಲಾಧಿಕಾರಿಯಾಗಿ ಶಿಲ್ಪಾನಾಗ್ ಅಧಿಕಾರ ಸ್ವೀಕಾರ ಮಾಡಿದ್ದಾರೆ. ಈ ಹಿಂದೆ ಮೈಸೂರಿನ ಪಾಲಿಕೆ ಅಧಿಕಾರಿಯಾಗಿ ಖಡಕ್ ಅಧಿಕಾರ ನಡೆಸಿದ್ದ ಶಿಲ್ಪಾನಾಗ್ ಚಾಮರಾಜನಗರ ಡಿಸಿಯಾಗಿ ಅಧಿಕಾರ ಸ್ವೀಕಾರ ಮಾಡಿದ್ದಾರೆ.