ಶಾಲೆಗಳ ಘೋಷವಾಕ್ಯ ಬದಲಾವಣೆ: ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹೇಳಿದ್ದೇನು..?

ಬೆಂಗಳೂರು: ಶಾಲೆಗಳೆಂದರೆ ಪವಿತ್ರ ತಾಣ  ಇದನ್ನು ಅರ್ಥೈಸಿಕೊಳ್ಳದ ಕಾಂಗ್ರೆಸ್ ಸರ್ಕಾರದ ಹಿಂದೂ ವಿರೋಧಿ ಮನಸ್ಥಿತಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರೆ ಕಿಡಿಕಾರಿದ್ದಾರೆ.  ಘೋಷವಾಕ್ಯ ಬದಲು ‘ಜ್ಞಾನ ದೇಗುಲವಿದು ಧೈರ್ಯವಾಗಿ ಪ್ರಶ್ನಿಸು’ ಎಂದು ಬದಲಾವಣೆ ಮಾಡಲಾಗಿದೆ.. ಈ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರೆ ಟ್ವಿಟರ್ ಎಕ್ಸ್ ಪೋಸ್ಟ್ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

 ಶಾಲೆಗಳೆಂದರೆ ಪವಿತ್ರ ತಾಣ  ಇದನ್ನು ಅರ್ಥೈಸಿಕೊಳ್ಳದ ಕಾಂಗ್ರೆಸ್ ಸರ್ಕಾರದ ಹಿಂದೂ ವಿರೋಧಿ ಮನಸ್ಥಿತಿ, ಇಲಾಖೆಯ ಹಿರಿಯ IAS ಅಧಿಕಾರಿಯ  ಮೂಲಕ ಸರ್ಕಾರಿ ವಸತಿ ಶಾಲೆಗಳ ದ್ವಾರದಲ್ಲಿ ಬರೆಸಲಾಗಿದ್ದ “ಜ್ಞಾನ ದೇಗುಲವಿದು ಕೈ ಮುಗಿದು ಒಳಗೆ ಬನ್ನಿ” ಎಂಬ ಘೋಷವಾಕ್ಯವನ್ನು ಬದಲಿಸಿ “ಜ್ಞಾನ ದೇಗುಲವಿದು ಧೈರ್ಯವಾಗಿ ಪ್ರಶ್ನಿಸಿ” ಎಂದು ಬರೆಸಲು ಪ್ರಾರಂಭಿಸಿದೆ.

ಮೊನ್ನೆಯಷ್ಟೇ ಇದೇ ಶಾಲೆಗಳಲ್ಲಿ  ಧಾರ್ಮಿಕ ಹಬ್ಬ , ಪೂಜೆಗಳಿಗೆ ನಿಷೇಧ ಹೇರಿ ಆದೇಶ ಹೊರಡಿಸಿ ಇದರಿಂದ ‘ಕೈ’ಸುಡಲು ಆರಂಭವಾದ ಬೆನ್ನಲ್ಲೇ ಆದೇಶ ಹಿಂಪಡೆದು ತನ್ನ ಹಿಂದೂ ವಿರೋಧಿ ಮನಸ್ಥಿತಿಯನ್ನು ಅದುಮಿಟ್ಟುಕೊಂಡಿದ್ದ ಸರ್ಕಾರ ಇದೀಗ ಮತ್ತೊಂದು ಮತಿಗೇಡಿತನಕ್ಕೆ ‘ಕೈ’ಹಾಕಿ ವಿಕೃತಿ ಮೆರೆದಿದೆ, ಜತೆಗೇ ವಿದ್ಯಾರ್ಥಿಗಳನ್ನು ಶಿಕ್ಷಕರ ವಿರುದ್ಧ ಎತ್ತಿಕಟ್ಟಲು ಈ ಸಾಲುಗಳು ಪ್ರಚೋದನೆ ನೀಡುವಂತಿದೆ ಎಂದಿದ್ದಾರೆ.

 

Loading

Leave a Reply

Your email address will not be published. Required fields are marked *