ಸಮಪ್ರಮಾಣದ ಪರಿಹಾರ, ಮನೆಗೊಂದು ಉದ್ಯೋಗ, ಸೈಟ್ ಗಾಗಿನ ನಿರಾಶ್ರಿತರ ಮನವಿಗೆ ಸಿದ್ದರಾಮಯ್ಯ ಸ್ಪಂದನೆ

ಬೆಂಗಳೂರು, ಅಕ್ಟೋಬರ್‌ 21- ಕಾರವಾರದಲ್ಲಿ ಸೀಬರ್ಡ್‌ ನೌಕಾನೆಲೆಯು ನಿರ್ಮಿಸುತ್ತಿರುವ ವಾಯುನೆಲೆಯನ್ನು ವಿಸ್ತರಿಸಿ, ಸಿವಿಲ್‌ ಎನ್‌ಕ್ಲೇವ್‌ ನಿರ್ಮಿಸುವ ಯೋಜನೆಗೆ ನಡೆಸುತ್ತಿರುವ ಭೂಸ್ವಾಧೀನ ಪ್ರಕ್ರಿಯೆಯ ಪರಿಹಾರ ನಿಗದಿಯಲ್ಲಿ ತಾರತಮ್ಯ ಆಗಿರುವುದನ್ನು ಗಮನಿಸಿದ ಮುಖ್ಯಮಂತ್ರಿಗಳು, 2013ರ ಭೂಸ್ವಾಧೀನ ಕಾಯ್ದೆಯನ್ವಯ ಇದನ್ನು ನಿವಾರಿಸಲು ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.

ಅವರು ಇಂದು ವಿಮಾನ ನಿಲ್ದಾಣ ನಿರ್ಮಾಣಕ್ಕಾಗಿ ನಡೆಯುತ್ತಿರುವ ಭೂಸ್ವಾಧೀನ ಪ್ರಕ್ರಿಯೆಯಲ್ಲಿ ನಡೆದಿರುವ ತಾರತಮ್ಯ ಕುರಿತು ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ, ಶಾಸಕ ಸತೀಶ್‌ ಸೈಲ್‌ ನೇತೃತ್ವದ ನಿಯೋಗವು ಮುಖ್ಯಮಂತ್ರಿಯವರನ್ನು ಭೇಟಿಯಾಗಿ ಚರ್ಚೆ ನಡೆಸಿದ ಸಂದರ್ಭದಲ್ಲಿ ಈ ವಿಷಯ ತಿಳಿಸಿದರು.

ಬಿಜೆಪಿ ಸರ್ಕಾರ ಮಾಡಿದ ಅನ್ಯಾಯ ಮತ್ತು ಮೋಸ ಸರಿಪಡಿಸಿ ಎಂದು ಸಭೆಯಲ್ಲಿ ಮೂರು ಗ್ರಾಮಗಳ ನಿರಾಶ್ರಿತ ಕುಟುಂಬಗಳು ಮಾಡಿಕೊಂಡ ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿಗಳು ವೈಜ್ಞಾನಿಕವಾಗಿ, ನಿಯಮಬದ್ದವಾಗಿ ಪರಿಹಾರ ಕೊಡುವ ದಿಕ್ಕಿನಲ್ಲಿ ಕ್ರಮ ಕೈಗೊಳ್ಳಲು ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಸೂಚಿಸಿದರು.

ಮುಖ್ಯ ಕಾರ್ಯದರ್ಶಿಗಳು ಮತ್ತು ಸಂಬಂಧಿಸಿದ ಇತರ ಹಿರಿಯ ಅಧಿಕಾರಿಗಳೊಂದಿಗೆ, ಭೂಸ್ವಾಧೀನ ಪರಿಹಾರ ನಿಗದಿ, ಭೂಮಿ ಕಳೆದುಕೊಂಡವರಿಗೆ ಉದ್ಯೋಗ ನೀಡುವ ಕುರಿತು ಹಾಗೂ ಸೂಕ್ತ ನಿವೇಶನ ನೀಡುವ ಕುರಿತಂತೆ ಸಭೆ ನಡೆಸಿ ಚರ್ಚಿಸುವಂತೆ ಕೈಗಾರಿಕೆ ಮತ್ತು ಮೂಲ ಸೌಲಭ್ಯ ಅಭಿವೃದ್ಧಿ ಸಚಿವ ಎಂ.ಬಿ.ಪಾಟೀಲರಿಗೆ ಸೂಚಿಸಿದರು.

Loading

Leave a Reply

Your email address will not be published. Required fields are marked *