ಶಿವಮೊಗ್ಗ : ಮುಖ್ಯಮಂತ್ರಿ ಸಿದ್ದರಾಮಯ್ಯ ಅಕ್ರಮವಾಗಿ ಗೆದ್ದಿದ್ದಾರೆ. ಸಿದ್ದರಾಮಯ್ಯ ಅವರನ್ನು ಚುನಾವಣಾ ಆಯೋಗ ಕಿತ್ತಿ ಎಸೆಯಬೇಕು ಎಂದು ಮಾಜಿ ಡಿಸಿಎಂ ಕೆಎಸ್ ಈಶ್ವರಪ್ಪ ಆಗ್ರಹಿಸಿದ್ದಾರೆ. ಅದಲ್ಲದೇ ಕಾವೇರಿ ನೀರಿನ ವಿಚಾರವಾಗಿ ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧವೂ ಈಶ್ವರಪ್ಪ ಕಿಡಿಕಾರಿದ್ದು, ಡಿಕೆಶಿ ನೀರಿನ ಕಳ್ಳ ಎಂದು ವಾಗ್ದಾಳಿ ನಡೆಸಿದ್ದಾರೆ.
ಯತೀಂದ್ರ ಸಿದ್ದರಾಮಯ್ಯ ಹೇಳಿಕೆಗೆ ಶಿವಮೊಗ್ಗದಲ್ಲಿ ಪ್ರತಿಕ್ರಿಯಿಸಿದ ಅವರು, ಚುನಾವಣಾ ಸಂದರ್ಭದಲ್ಲಿ ಕುಕ್ಕರ್, ಐರನ್ ಬಾಕ್ಸ್ ವಿತರಣೆ ಮಾಡಲಾಗಿದೆ. ಇದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಕೊಟ್ಟಿರುವ ಹೇಳಿಕೆ. ಚುನಾವಣಾ ಆಯೋಗ ಇದನ್ನು ಗಂಭೀರವಾಗಿ ಪರಿಗಣಿಸಬೇಕು. ಸಿದ್ದರಾಮಯ್ಯ ಅಕ್ರಮವಾಗಿ ಜಯ ಗಳಿಸಿದ್ದಾರೆ. ಸಿದ್ದರಾಮಯ್ಯ ಅವರನ್ನು ಚುನಾವಣಾ ಆಯೋಗ ಕಿತ್ತು ಎಸೆಯಬೇಕು ಎಂದು ಒತ್ತಾಯಿಸಿದ್ದಾರೆ.
ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ವಿಚಾರಕ್ಕೆ ಪ್ರತಿಕ್ರಿಯಿಸಿ, ಡಿಕೆ ಶಿವಕುಮಾರ್ ನೀರಿನ ಕಳ್ಳ, ನಮ್ಮ ರಾಜ್ಯದ ರೈತರಿಗೆ ದ್ರೋಹ ಮಾಡಿ ತಮಿಳುನಾಡಿಗೆ ನೀರು ಬಿಡುತ್ತಿದ್ದಾರೆ. ನಮ್ಮ ರಾಜ್ಯದ ರೈತರಿಗೆ ಮೋಸ ಮಾಡಿದ್ದಾರೆ. ಡಿಕೆಶಿ ಒಬ್ಬ ಅಯೋಗ್ಯ ಉಪಮುಖ್ಯಮಂತ್ರಿ ಎಂದ ಅವರು, ಬಿಜೆಪಿ ಜೆಡಿಎಸ್ ಮೈತ್ರಿ ವಿಚಾರ. ಈ ಬಗ್ಗೆ ಚರ್ಚೆ ನಡೆಯುತ್ತಿದೆ. ಅದರಾಚೆಗೆ ಏನು ನಡೆದಿದೆ ಎಂಬುದು ಗೊತ್ತಿಲ್ಲ ಎಂದು ಹೇಳಿದರು.