ಸ್ಪಂದನಾ ನಿಧನಕ್ಕೆ ಮುಖ್ಯಮಂತ್ರಿಗಳ ಸಂತಾಪ

ಖ್ಯಾತ ಸಿನಿಮಾ ನಟ ವಿಜಯ ರಾಘವೇಂದ್ರ ಅವರ ಪತ್ನಿ ಸ್ಪಂದನಾ ಅವರ ಅಕಾಲಿಕ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಅವರು ಇಂದು ನಟ ವಿಜಯ ರಾಘವೇಂದ್ರ ಅಪರ ಪತ್ನಿ ಸ್ಪಂದನಾ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.

ಅಪೂರ್ವ ಎಂಬ ಸಿನಿಮಾದಲ್ಲಿ ನಟಿಸಿದ್ದ ಸ್ಪಂದನಾ ಅಕಾಲಿಕ ಮರಣಕ್ಕೆ ತುತ್ತಾಗಿದ್ದಾರೆ. ಬಾಳಿ ಬದುಕಬೇಕಾಗಿದ್ದ ಸ್ಪಂದನಾ ಅವರದು ಸುಂದರ ಕುಟುಂಬ. ಥೈಲ್ಯಾಂಡ್ ದೇಶಕ್ಕೆ ಪ್ರವಾಸಕ್ಕೆಂದು ತೆರಳಿದ್ದ ಸಂದರ್ಭದಲ್ಲಿ ಸ್ಪಂದನಾ ಅವರು ಮೃತಪಟ್ಟಿರುವುದು ನೋವಿನ ಸಂಗತಿ. ಬಿ.ಕೆ.ಶಿವರಾಂ ಹಾಗೂ ವಿಜಯ ರಾಘವೇಂದ್ರ ಕುಟುಂಬಕ್ಕೆ ಸ್ಪಂದನಾ ಅವರ ಸಾವಿನಿಂದ ತುಂಬಲಾರದ ನಷ್ಟವುಂಟಾಗಿದೆ. ಅವರ ಆತ್ಮಕ್ಕೆ ಶಾಂತಿ ದೊರೆಯಲಿ. ಅವರ ಕುಟುಂಬ ಹಾಗೂ ಅಭಿಮಾನಿಗಳಿಗೆ ಅಗಲಿಕೆಯ ದು:ಖವನ್ನು ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು.

Loading

Leave a Reply

Your email address will not be published. Required fields are marked *