ಚಿಕ್ಕಮಗಳೂರು : ಚಿಕ್ಕಮಗಳೂರು ಇನ್ಮುಂದೆ ವೀರಶೈವ ಲಿಂಗಾಯತರ ಕ್ಷೇತ್ರವಾಗಲಿದೆ ಎಂದು ಬಿಜೆಪಿ ಮಾಜಿ ಶಾಸಕ ಎಂಪಿ ಕುಮಾರಸ್ವಾಮಿ ಹೇಳಿದ್ದಾರೆ.
ಚಿಕ್ಕಮಗಳೂರು ಕ್ಷೇತ್ರದಲ್ಲಿ ಸಿಟಿ ರವಿ ಸೋಲಿನ ಕುರಿತು ಪ್ರತಿಕ್ರಿಯೆ ನೀಡಿ ಸುದ್ದಿಗಾರರ ಜೊತೆ ಮಾತನಾಡಿದರು.
ಚಿಕ್ಕಮಗಳೂರು ಇನ್ಮುಂದೆ ವೀರಶೈವ ಲಿಂಗಾಯತರ ಕ್ಷೇತ್ರವಾಗಲಿದೆ, ಸಿಟಿ ರವಿ ದತ್ತಮಾಲೆ, ಅಹಿತಕರ ಘಟನೆ ಮುಂದಿಟ್ಟುಕೊಂಡು ಪ್ರಚಾರ ನಡೆಸುತ್ತಿದ್ದರು. ಇನ್ಮುಂದೆ ಅವರ ಆಟ ನಡೆಯಲ್ಲ. ಮೂಡಿಗೆರೆಯಲ್ಲಿ ಬಿಜೆಪಿಗಾಗಿ ನಾನು ದುಡಿದಿದ್ದೆ, ನನ್ನನ್ನು ಸಿಟಿ ರವಿ ಬಿಜೆಪಿಯಿಂದ ಖಾಲಿ ಮಾಡಿಸಿದರು ಎಂದರು. ನನ್ನನ್ನು ಬಿಟ್ಟಿದ್ದಕ್ಕೆ 5 ಕ್ಕೆ 5 ಕ್ಷೇತ್ರ ಹೋಯಿತು ಎಂದು ಎಂದು ಬಿಜೆಪಿ ಮಾಜಿ ಶಾಸಕ ಎಂಪಿ ಕುಮಾರಸ್ವಾಮಿ ಹೇಳಿದ್ದಾರೆ.