ಹರಿಹರ ತಾಲ್ಲೂಕಿನ ಕುಂಬಳೂರು ಗ್ರಾಮದಲ್ಲಿ ಮನೆ ಗೋಡೆ ಕುಸಿದು ಒಂದು ವರ್ಷದ ಹೆಣ್ಣು ಮಗು ಸಾವನ್ನಪ್ಪಿರುವ ಹಿನ್ನೆಲೆಯಲ್ಲಿ ಹರಿಹರ ವಿಧಾನಸಭಾ ಕ್ಷೇತ್ರದ ಭಾ.ಜ.ಪಾ ಮುಖಂಡರಾದ ಶ್ರೀ ಚಂದ್ರಶೇಖರ್ ಪೂಜಾರ್ ಹನಗವಾಡಿ (Chandrasekhar Pujar Hanagawadi) ಅವರು ಭೇಟಿ ನೀಡಿ, ಆರ್ಥಿಕ ಸಹಾಯ ಮಾಡುವ ಮೂಲಕ ಸಾಂತ್ವಾನ ಹೇಳಿದರು.
ಸ್ಪೂರ್ತಿ(01) ಸಾವನ್ನಪ್ಪಿದ ಹೆಣ್ಣು ಮಗು ಎಂದು ಗುರುತಿಸಲಾಗಿದ್ದು, ತಂದೆ ಕೆಂಚಪ್ಪ (32) ಗಾಯಗೊಂಡಿದ್ದು ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗ್ತಿದೆ, ಕಳೆದ ಮೂರು ದಿನಗಳಿಂದ ನಿರಂತರ ಮಳೆ ಹಿನ್ನಲೆ, ಮಳೆಗೆ ಸಂಪೂರ್ಣವಾಗಿ ಮನೆ ನೆನೆದಿತ್ತು ಎಂದು ವರದಿಯಾಗಿದೆ.
ರಾಜ್ಯದಲ್ಲಿ ಮುಂಗಾರು(Monsoon) ಮಳೆ ಚುರುಕುಗೊಂಡಿದೆ. ಮಳೆ ಅಬ್ಬರಕ್ಕೆ ಅನೇಕ ಜಿಲ್ಲೆಗಳು ತತ್ತರಿಸಿದ್ದು ಡ್ಯಾಂಗಳು ತುಂಬಿ ಹರಿಯುತ್ತಿವೆ. ರಸ್ತೆಗಳು, ಸೇತುವೆಗಳು ಜಲಾವೃತಗೊಂಡಿವೆ. ಮನೆಗಳಿಗೆ ನೀರು ನುಗ್ಗಿ ಜನ ಜೀವನ ಅಸ್ತವ್ಯಸ್ತವಾಗಿದೆ(Karnataka Flood). ಕರಾವಳಿ, ಮಲೆನಾಡು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ.