ಸ್ವಚ್ಚತೆ ನೆಪದಲ್ಲಿ ಮಲದ ಗುಂಡಿಗೆ ಮಕ್ಕಳನ್ನು ಇಳಿಸಿದ ಶಿಕ್ಷಕರು ಇಳಿದ ಮಕ್ಕಳು – ಪೋಷಕರ ಆಕ್ರೋಶ

ಕೋಲಾರ:- ಯಲವಳ್ಳಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಸ್ವಚ್ಛತೆಯ ನೆಪದಲ್ಲಿ ಮಕ್ಕಳನ್ನೇ ಮಲದ ಗುಂಡಿಗೆ ಇಳಿಸಿದ ಪ್ರಕರಣ ಬೆಳಕಿಗೆ ಬಂದಿದೆ. ಪೋಷಕರು ದೂರು ನೀಡಿದ್ದಾರೆ. ಮಾಲೂರು ತಾಲೂಕಿನ ಯಲಹೊಳ್ಳಿ ಗ್ರಾಮದಲ್ಲಿರುವ ಈ ಶಾಲೆಯ ಮಕ್ಕಳನ್ನು ಮಲದ ಗುಂಡಿಗೆ ಇಳಿಸಿದ್ದ ಶಿಕ್ಷಕರು ಸ್ವಚ್ಛತಾ ಕಾರ್ಯ ಮಾಡಿಸಿದ್ದರು. ಮೂರ್ನಾಲ್ಕು ದಿನಗಳ ಹಿಂದೆ ಈ ಘಟನೆ ನಡೆದಿತ್ತು. ಈ ಕುರಿತ ಚಿತ್ರ ಎಲ್ಲೆಡೆ ಹರಿದಾಡಿ ವಿರೋಧ ವ್ಯಕ್ತಗೊಂಡಿತ್ತು. ಬಳಿಕ ಮೊರಾರ್ಜಿ ಶಾಲೆ ಪ್ರಾಂಶುಪಾಲ ಹಾಗೂ, ಶಿಕ್ಷಕರ ವಿರುದ್ಧ ಪೋಷಕರು ದೂರು ದಾಖಲಿಸಲಾಗಿದೆ.

ಪ್ರಾಂಶುಪಾಲರ ಎದುರಲ್ಲೇ ಸಿಬ್ಬಂದಿಗಳು ಮಕ್ಕಳಿಂದ ಮಲದ ಗುಂಡಿಗೆ ಇಳಿಸಿ ಕ್ಲೀನ್ ಮಾಡಿಸಿದ್ದರು. ಕಳೆದ ಹಲವು ದಿನಗಳಿಂದ ಮಕ್ಕಳಿಗೆ ಇದೇ ರೀತಿಯಲ್ಲಿ ರೀತಿಯಲ್ಲಿ ಕಿರುಕುಳ ನೀಡಲಾಗುತ್ತಿತ್ತು ಎಂಬ ಆರೋಪ ಕೇಳಿ ಬಂದಿದೆ. ಪ್ರಾಂಶುಪಾಲೆ ಭಾರತಮ್ಮ, ಶಿಕ್ಷಕ ಅಭಿಷೇಕ್ ಹಾಗೂ ವಾರ್ಡನ್ ಮಂಜುನಾಥ್ ಸೇರಿ ಕೆಲವು ಶಿಕ್ಷಕರಿಂದ ಮಕ್ಕಳಿಗೆ ಕಿರುಕುಳ ನೀಡಲಾಗುತ್ತಿದೆ ಎಂಬ ಆರೋಪವಿದೆ.

ಮಕ್ಕಳಿಗೆ ಹೊಡೆಯುವುದು, ಮಕ್ಕಳನ್ನು ರಾತ್ರಿ ಹೊತ್ತಿನಲ್ಲಿ ಬ್ಯಾಗ್ ಹೊರಿಸಿ ಕೂರಿಸಿ ಹಿಂಸೆ ಕೊಡಲಾಗುತ್ತಿದೆ ಎಂದು ದೂರಲಾಗಿದೆ. ಘಟನೆ ಹಿನ್ನೆಲೆಯಲ್ಲಿ ಸ್ಥಳಕ್ಕೆ ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಶ್ರೀನಿವಾಸ್ ಬೇಟಿ ಪರಿಶೀಲನೆ ನಡೆಸಿದ್ದಾರೆ

Loading

Leave a Reply

Your email address will not be published. Required fields are marked *