ಬೆಂಗಳೂರು: ಕೆಲ ಚುನಾವಣೋತ್ತರ ಸಮೀಕ್ಷೆಗಳು ಕಾಂಗ್ರೆಸ್ ಗೆ ಸ್ಪಷ್ಟ ಬಹುಮತವೆಂದರೇ, ಮತ್ತೆ ಕೆಲ ಸಮೀಕ್ಷೆಗಳು ಅತಂತ್ರ ವಿಧಾನಸಭೆಯ ವಾತಾವರಣ ನಿರ್ಮಾಣವಾಗುವುದಾಗಿ ಹೇಳಿದ್ದಾವೆ. ಈ ನಡುವೆ ಸಿದ್ಧರಾಮಯ್ಯ ನಾನು ವರುಣಾದಲ್ಲಿ ಗೆಲ್ಲುವುದು ಖಚಿತ, ಕಾಂಗ್ರೆಸ್ ಗೆ ಸ್ಪಷ್ಟ ಬಹುಮತ ಬರಲಿದೆ ಎಂದಿದ್ದಾರೆ.
ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಕಾಂಗ್ರೆಸ್ ಪಕ್ಷವು ಆರಾಮಾಗಿ ಬಹುಮತವನ್ನು ಪಡೆಯುತ್ತದೆ. ವರುಣಾ ಕ್ಷೇತ್ರದಲ್ಲಿ ನಾನು ಆರಾಮವಾಗಿ ಗೆಲ್ಲುತ್ತೇನೆ ಎಂದರು.
ಮತ್ತೊಂದೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಮಾತನಾಡಿ, ನಾನು ಎಕ್ಸಿಟ್ ಪೋಲ್ ಸಂಖ್ಯೆಯನ್ನು ನಂಬುವುದಿಲ್ಲ. ನಾವು 146 ಸ್ಥಾನಗಳನ್ನು ದಾಟುತ್ತೇವೆ ಎಂದರು.
ನಾನು ನನ್ನ ಸಂಖ್ಯೆಗೆ ಬದ್ಧನಾಗಿರುತ್ತೇನೆ. ಜನರು ಕಾಂಗ್ರೆಸ್ ಗೆ ಒಲವು ತೋರಿದ್ದಾರೆ. ಕರ್ನಾಟಕದಲ್ಲಿ ಡಬಲ್ ಎಂಜಿನ್ ವಿಫಲವಾಗಿರುವುದು ನಿಜ. ಯಾವುದೇ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳುವ ಪರಿಸ್ಥಿತಿ ಉದ್ಭವಿಸುವುದಿಲ್ಲ ಎಂಬುದಾಗಿ ಹೇಳಿದರು.
ಹುಬ್ಬಳ್ಳಿ ಸೆಂಟ್ರಲ್ ಕಾಂಗ್ರೆಸ್ ಅಭ್ಯರ್ಥಿ ಜಗದೀಶ್ ಶೆಟ್ಟರ್ ಮಾತನಾಡಿ, ಕಾಂಗ್ರೆಸ್ ಸ್ಪಷ್ಟ ಬಹುಮತ ಪಡೆದು ಸರ್ಕಾರ ರಚಿಸಲಿದೆ. ಚುನಾವಣೋತ್ತರ ಸಮೀಕ್ಷೆಗಳ ಪ್ರಕಾರ, ಕಾಂಗ್ರೆಸ್ ಏಕೈಕ ದೊಡ್ಡ ಪಕ್ಷವಾಗಿದೆ. ಬೇರೆ ಯಾವುದೇ ಪಕ್ಷದೊಂದಿಗೆ, ವಿಶೇಷವಾಗಿ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ ಎಂದರು.