ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ಹರಕೆ ಸಲ್ಲಿಸಿದರು. ತಾಯಿ ಚಾಮುಂಡಿಗೆ ಹಸಿರು ಮತ್ತು ಕೆಂಪು ಸೀರೆ ನೀಡಿ ಹರಕೆ ಸಲ್ಲಿಸಿದರು. ಕನಕಾಂಬರ, ಮಲ್ಲಿಗೆ, ಗುಲಾಬಿ ಹೂವಿನ ಹಾರ ಮತ್ತು ಫಲ ಸಮರ್ಪಣೆ ಮಾಡಿದರು. ಸಿಎಂ ಮತ್ತು ಡಿಸಿಎಂ ಗ್ಯಾರಂಟಿ ಕಾರ್ಡ್ ಇಟ್ಟು ಪೂಜೆ ಸಲ್ಲಿಸುವಾಗ ಹರಕೆ ಕಟ್ಟಿಕೊಂಡಿದ್ದರು. ಅದರಂತೆ ಈಗ ಹರಕೆ ಸಲ್ಲಿಸಿದ್ದಾರೆ.
ಇನ್ನೂ ನಾಳೆ ರಂದು ಮೈಸೂರಿನಲ್ಲಿ ಗೃಹಲಕ್ಷ್ಮೀ ಯೋಜನೆಗೆ ಚಾಲನೆ ದೊರೆಯಲಿದೆ. ಈ ಹಿನ್ನೆಲೆಯಲ್ಲಿ ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಬೃಹತ್ ವೇದಿಕೆ ನಿರ್ಮಾಣವಾಗುತ್ತಿದೆ. ನಾಳೆಯ ಕಾರ್ಯಕ್ರಮದ ಸುತ್ತಮುತ್ತ ವಾಹನ ಸಂಚಾರಕ್ಕೆ ನಿರ್ಬಂಧಿಸಲಾಗಿದೆ. ಬೆಳಿಗ್ಗೆ 8ರಿಂದ ಸಂಜೆ 6ರವರೆಗೆ ವಾಹನ ಸಂಚಾರ ನಿರ್ಬಂಧಿಸಿ ಪೊಲೀಸ್ ಕಮಿಷನರ್ ರಮೇಶ್ ಬಾನೋತ್ ಆದೇಶ ಹೊರಡಿಸಿದ್ದಾರೆ.