ಬೆಂಗಳೂರು: ವಿಧಾನಸೌಧದ ಗ್ರ್ಯಾಂಡ್ ಸ್ಟೆಪ್ ಮುಂಭಾಗ ನಡೆದ ಕಾರ್ಯಕ್ರಮದಲ್ಲಿ ಕೆಎಸ್ಆರ್ಟಿಸಿ ಪಲ್ಲಕ್ಕಿ ಬಸ್ಗಳಿಗೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದ್ದಾರೆ. ಪಲ್ಲಕ್ಕಿ ಉತ್ಸವ ಹೆಸರಿನ 40 ನಾನ್ ಎಸಿ ಸ್ಲೀಪರ್ ಬಸ್ಗೆ ಗ್ರೀನ್ ಸಿಗ್ನಲ್ ನೀಡಲಾಗಿದೆ. ಒಟ್ಟು 148 ಬಸ್ಗಳಿಗೆ ಚಾಲನೆ ನೀಡಲಾಗಿದ್ದು 148 ಬಸ್ಸುಗಳ ಪೈಕಿ 100 ಬಸ್ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ,
44 ಎಸಿ ಸ್ಲೀಪರ್ನಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶವಿಲ್ಲ. 4 ನಾನ್ ಎಸಿ ಸ್ಲೀಪರ್ ಬಸ್ಗಳಲ್ಲೂ ಉಚಿತ ಪ್ರಯಾಣಕ್ಕೆ ಅವಕಾಶವಿಲ್ಲ. ಉದ್ಘಾಟನೆ ಸಮಾರಂಭದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಉಪಸ್ಥಿತರಿದ್ದರು.