ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಿನ್ನೆ (ಜು.07) 2023-24ನೇ ಸಾಲಿನ ಬಜೆಟ್ ಮಂಡನೆ ಮಾಡಿದ್ದು, ಇಂದು (ಜು.08) ರಿಲ್ಯಾಕ್ಸ್ ಮೂಡ್ನಲ್ಲಿದ್ದಾರೆ. ಇಂದಿನ ಬಹುತೇಕ ಕಾರ್ಯಕ್ರಮಗಳನ್ನು ರದ್ದುಪಡಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರ ಕರ್ನಾಟಕದ 2023-24ನೇ ಸಾಲಿನ ಬಜೆಟ್ ಮಂಡನೆ ಮಾಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 14ನೇ ಬಾರಿ ಬಜೆಟ್ ಮಂಡನೆ ಮಾಡುವ ಮೂಲಕ ದಾಖಲೆ ಬರೆದಿದ್ದಾರೆ.