ಬೆಂಗಳೂರು: ಸಿಎಂ ಸಿದ್ದರಾಮಯ್ಯ ಬಜೆಟ್ ರಾಜ್ಯದ ಅಭಿವೃದ್ಧಿಗೆ ಪೂರಕವಾಗಿಲ್ಲ. ಎಲ್ಲಾ ಕ್ಷೇತ್ರಗಳಲ್ಲೂ ಸಹ ಸುಳ್ಳು ಭರವಸೆ ನೀಡಿದ್ದಾರೆ. ಘೋಷಣೆ ವೇಳೆ ಗ್ಯಾರಂಟಿ ಯೋಜನೆಗಳಿಗೆ ಷರತ್ತು ಹಾಕಿರಲಿಲ್ಲ. ಈಗ ಗ್ಯಾರಂಟಿ ಯೋಜನೆಗಳಿಗೆ ಷರತ್ತು ವಿಧಿಸಿದ್ದಾರೆ. ಬಿಜೆಪಿ ಸರ್ಕಾರದ 20ಕ್ಕೂ ಹೆಚ್ಚು ಯೋಜನೆ ಕೈಬಿಟ್ಟಿದ್ದಾರೆ. ಬಿಜೆಪಿ ಸರ್ಕಾರದ ಯೋಜನೆ ಕೈಬಿಟ್ಟಿದ್ದು ಜನರಿಗೆ ಮಾಡಿದ ಮೋಸ. ಒಂದು ಸಮುದಾಯದ ಓಲೈಕೆಯ ಬಜೆಟ್ ಎಂದು ಬೆಳಗಾವಿಯಲ್ಲಿ ಮಾಜಿ ಸಚಿವ ಮುರುಗೇಶ್ ನಿರಾಣಿ ಹೇಳಿದ್ದಾರೆ.