ಬೆಂಗಳೂರು ;- ತೀವ್ರ ಜ್ವರ ಹಿನ್ನೆಲೆ ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಸಿದ್ದರಾಮಯ್ಯ ಅವರು ಇಂದು ಬೆಳಗ್ಗೆ 9.50ಕ್ಕೆ ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದಿಂದ ದೆಹಲಿಗೆ ತೆರಳಬೇಕಿತ್ತು. ಆದ್ರೆ, ಪತ್ನಿಗೆ ಅನಾರೋಗ್ಯ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಲಿದ್ದಾರೆ. ಹೀಗಾಗಿ ಬೆಳಗ್ಗೆ 11.30 ಗೆ ಹೆಚ್ಎಎಲ್ ನಿಲ್ದಾಣದಿಂದ ವಿಶೇಷ ವಿಮಾನ ಮೂಲಕ ದೆಹಲಿಗೆ ತೆರಳಲಿದ್ದಾರೆ ಎಂದು ತಿಳಿದು ಬಂದಿದೆ.