ಮೈಸೂರು: ಬೆಂಗಳೂರಿನಲ್ಲಿ ಐಟಿ ದಾಳಿ ವೇಳೆ ಕೋಟ್ಯಂತರ ಹಣ ಪತ್ತೆ ಪ್ರಕರಣಕ್ಕೆ ಸಂಬಂಧಿಸಿ ಮೈಸೂರು ಜಿಲ್ಲೆ ನಂಜನಗೂಡಿನಲ್ಲಿ ಮಾಜಿ ಸಿಎಂ ಹೆಚ್’ಡಿ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ. ಹಣ ಲೂಟಿ ಹೊಡೆದ ಬಗ್ಗೆ ಸಿಎಂ ಸತ್ಯವನ್ನು ಬಹಿರಂಗಪಡಿಸಲಿ.
ಅವರು ಒಬ್ಬರೇ ಸತ್ಯಹರಿಶ್ಚಂದ್ರರು ಅಂತಾರೆ, ಸತ್ಯ ಹೊರಗೆ ಇಡಲಿ. ದೇವರ ಸನ್ನಿಧಿಯಲ್ಲಿ ನಿಂತುಕೊಂಡು ನಾನು ಹೇಳ್ತಾ ಇದ್ದೇನೆ. ಕೋಟ್ಯಂತರ ಹಣ ಪತ್ತೆಯಾಗಿದೆ, ಇದರಲ್ಲಿ ಯಾರ ಪಾತ್ರ ಇದೆ. ಅಧಿಕಾರಿಗಳಿಂದ, ಕಂಟ್ರಾಕ್ಟರ್ರಿಂದ ಹಣ ವಸೂಲಿ ಮಾಡಿದ್ದಾರೆ. ಪ್ರತಿಯೊಂದಕ್ಕೂ ತನಿಖೆ ಅಂತಾರೆ, ಇದೊಂದು ತನಿಖೆ ಮಾಡಿಸಲಿ ಎಂದರು.