BJP MLC ಛಲವಾದಿ ನಾರಾಯಣಸ್ವಾಮಿ ವಿರುದ್ಧ ದೂರು

ಬೆಂಗಳೂರು: ಬಿಜೆಪಿ ಪಕ್ಷದ ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ಅವರು ಕಾಂಗ್ರೆಸ್ ಪಕ್ಷದ ನಾಯಕರಾಗಿರುವ ರಾಹುಲ್ ಗಾಂಧಿ ವಿರುದ್ಧ ಆಧಾರ ರಹಿತ ಆರೋಪ ಮಾಡಿರುವ ಹಿನ್ನೆಲೆಯಲ್ಲಿ ಕೂಡಲೇ ಅವರ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಬೇಕೆಂದು ಆಗ್ರಹಿಸಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಸ್.

ಮನೋಹರ್ ಅವರಿಂದ ಹೈಗ್ರೌಂಡ್ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದರು.

ಅದೇನೆಂದರೆ ಛಲವಾದಿ ನಾರಾಯಣಸ್ವಾಮಿ ಅವರು ರಾಹುಲ್ ಗಾಂಧಿ ವಿರುದ್ಧ ಇಲ್ಲಸಲ್ಲದ ಆರೋಪ ಮಾಡಿರುವ ಅವರು, ಶ್ರೀಯುತ ರಾಹುಲ್ ಗಾಂಧಿ ಅವರು ದ್ವಿಪೌರತ್ವ ಹೊಂದಿದ್ದು, ಅವರ ಪೌರತ್ವವನ್ನು ಮುಟ್ಟುಗೋಲು ಹಾಕಿ ಹಾಗೆ ಅವರನ್ನು ಗಡಿಪಾರು ಮಾಡಬೇಕೆಂದು ಹಾಗೂ ಇದರಿಂದ ದೇಶದಲ್ಲಿ ಅಭದ್ರತೆ ಸೃಷ್ಟಿಸುವ ತೊಂದರೆ ಉಂಟು ಮಾಡುವ ಮನಃಸ್ಥಿತಿಯನ್ನು ರಾಹುಲ್ ಗಾಂಧಿ ಹೊಂದಿದ್ದಾರೆ ಎಂದು ಅವರ ವಿರುದ್ಧ ಆರೋಪ ಮಾಡಿರುತ್ತಾರೆ.

ಯಾರು ಇವರಿಗೆ ಈ ರೀತಿ ಮಾಹಿತಿ ನೀಡುತ್ತಿದ್ದಾರೆ ಎಂಬುದು ತನಿಖೆ ಮೂಲಕ ಸತ್ಯಾಂಧ ರಾಜ್ಯದ ಜನರ ಮುಂದಿಡಬೇಕು ಹಾಗಾಗಿ ಅವರ ವಿರುದ್ಧ ಕಠಿಣ ಕ್ರಮ ತೆಗೆದುಕೊಂಡು ಸತ್ಯಾಸತ್ಯತೆ ಹೊರಬರಬೇಕೆಂದು ಪೊಲೀಸರ ಬಳಿ ಮನವಿ ಮಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಸ್. ಮನೋಹರ್.

Loading

Leave a Reply

Your email address will not be published. Required fields are marked *