ಬೆಂಗಳೂರು: ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಪುತ್ರ ಉದಯನಿಧಿ ಸ್ಟಾಲಿನ್ ಸನಾತನ ಧರ್ಮದ ಬಗ್ಗೆ ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದು, ಹಿಂದೂಪರ ಸಂಘಟನೆಗಳ ಆಕ್ರೋಶಕ್ಕೆ ಗುರಿಯಾಗಿದ್ದಾರೆ. ಇವರ ಈ ಹೇಳಿಕೆಗೆ ಎಲ್ಲೆಡೆ ತೀವ್ರ ಖಂಡನೆ ವ್ಯಕ್ತವಾಗಿದ್ದು, ಈಗಾಗಲೇ ದೆಹಲಿಯಲ್ಲಿ ಉದಯನಿಧಿ ಸ್ಟಾಲಿನ್ ವಿರುದ್ಧ ದೂರು ದಾಖಲಾಗಿದ್ದು,
ರಾಜ್ಯದಲ್ಲೂ ದೂರು ದಾಖಲು ಮಾಡುವ ನಿರ್ಧಾರ ಕೈಗೊಳ್ಳುವಂತೆ ಸಂಘಟನೆಗಳು ಒತ್ತಾಯಿಸಿವೆ. ರಾಷ್ಟ್ರವ್ಯಾಪಿ ಸ್ಟಾಲಿನ್ ವಿರುದ್ಧ ದೂರು ದಾಖಲು ಮಾಡಲು ನಿರ್ಧಾರ ಮಾಡಿದ್ದು, ಉದಯನಿಧಿ ಹೇಳಿಕೆ ವಿರುದ್ಧ ಆಂದೋಲನ ಹಾಗೂ ಪ್ರತಿಭಟನೆಗೆ ಹಿಂದೂಪರ ಸಂಘಟನೆಗಳು ಪ್ಲ್ಯಾನ್ ಮಾಡಿದೆ.