ಬೆಂಗಳೂರು : ಚುನಾವಣೆ ವೇಳೆ ಕಾಂಗ್ರೆಸ್ ಘೋಷಿಸಿದ್ದ ಗ್ಯಾರೆಂಟಿಗಳಿಗೆ ಷರತ್ತು ಹಾಕುತ್ತಿದೆ. ಕಾಂಗ್ರೆಸ್ ಸರ್ಕಾರ ಜನರಿಗೆ ಘೋಷಿಸಿದ ಕೊಡುಗೆಗಳನ್ನು ಈಡೇರಿಸಬೇಕು ಎಂದು ಮಾಜಿ ಸಚಿವ ಅಶ್ವಥ್ ನಾರಾಯಣ್ ಹೇಳಿದ್ದಾರೆ.
ಸುದ್ದಿಗಾರರ ಜೊತೆ ಮಾತನಾಡಿದ ಮಾಜಿ ಸಚಿವ ಅಶ್ವಥ್ ನಾರಾಯಣ್ ಕಾಂಗ್ರೆಸ್ ವಿರುದ್ಧ ಕಿಡಿಕಾರಿದರು.
ಕಾಂಗ್ರೆಸ್ ಚುನಾವಣೆ ವೇಳೆ ಘೋಷಿಸಿದಂತೆ ಕೊಟ್ಟ ಮಾತಿನಂತೆ ನಡೆದುಕೊಳ್ಳಬೇಕು. ಗ್ಯಾರೆಂಟಿಗಳಿಗೆ ಯಾವುದೇ ಷರತ್ತು ಹಾಕದೇ ಭರವಸೆಗಳನ್ನು ಈಡೇರಿಸಬೇಕು ಎಂದು ಹೇಳಿದರು.
ವಿಧಾನಸಭೆ ಚುನಾವಣೆಯಲ್ಲಿ ಗೆದ್ದು ಬೀಗಿದ ಕಾಂಗ್ರೆಸ್ ಸಿಎಂ ಆಯ್ಕೆಗೆ ಕಸರತ್ತು ನಡೆಸುತ್ತಿದ್ದು, ಸಿದ್ದರಾಮಯ್ಯ ಹಾಗೂ ಡಿಕೆಶಿ ನಡುವೆ ಫೈಟ್ ನಡೆಯುತ್ತಿದೆ.ಇದರ ನಡುವೆ ಜಿ. ಪರಮೇಶ್ವರ್ ನೀಡಿದ ಹೇಳಿಕೆಯೊಂದು ಸುದ್ದಿಯಾಗುತ್ತಿದೆ.ಕಾಂಗ್ರೆಸ್ ಘೋಷಿಸಿದ ಗ್ಯಾರಂಟಿಗಳಿಗೆ ಕಂಡಿಷನ್ಸ್ ಇರುತ್ತವೆ. ಸುಮ್ಮನೆ ಕೊಟ್ಟರೆ ಎಲ್ಲರೂ ತೆಗೆದುಕೊಳ್ಳುತ್ತಾರೆ. ಹೀಗಾಗಿ ಗ್ಯಾರಂಟಿಗಳಿಗೆ ಮಾನದಂಡ ಇರುತ್ತೆ, ಕಂಡೀಷನ್ ಗಳು ಅಪ್ಲೈ ಆಗುತ್ತದೆ ಎಂದು ಡಾ. ಜಿ. ಪರಮೇಶ್ವರ್ ಹೇಳಿದ್ದಾರೆ. ಸುದ್ದಿಗಾರರ ಜೊತೆ ಮಾತನಾಡಿದ ಪರಮೇಶ್ವರ್ ಹೀಗೆ ಪ್ರತಿಕ್ರಿಯೆ ನೀಡಿದರು.