ರಾಹುಲ್ ಗಾಂಧಿಯನ್ನು ಪ್ರಧಾನಿ ಅಭ್ಯರ್ಥಿಯನ್ನಾಗಿ ಮಾಡಲು ಕಾಂಗ್ರೆಸ್ ನಿರ್ಧಾರ: ಅಶೋಕ್ ಗೆಹ್ಲೋಟ್

ನವದೆಹಲಿ: ರಾಹುಲ್ ಗಾಂಧಿಯನ್ನು ಪ್ರಧಾನಿ ಅಭ್ಯರ್ಥಿಯನ್ನಾಗಿ ಮಾಡಲು ಕಾಂಗ್ರೆಸ್ ನಿರ್ಧರಿಸಿದೆ ಎಂದು ಗೆಹ್ಲೋಟ್ ಹೇಳಿದ್ದಾರೆ. ಃವದು 2024ರ ಲೋಕಸಭೆ ಚುನಾವಣೆಗೆ ರಾಹುಲ್ ಗಾಂಧಿ ಕಾಂಗ್ರೆಸ್ ಪಕ್ಷದ ಪ್ರಧಾನಿ ಅಭ್ಯರ್ಥಿ ಎಂದು ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಹೇಳಿದ್ದಾರೆ. 26 ವಿರೋಧ ಪಕ್ಷಗಳ ಐಎನ್ಡಿಐಎ ಸಭೆ ಕುರಿತು ಮಾತನಾಡಿದ ಅವರು, ಈ ನಿರ್ಧಾರವನ್ನು ಎಲ್ಲಾ ಪಕ್ಷಗಳು ಚರ್ಚೆ ಮತ್ತು ಸಮಾಲೋಚನೆ ನಡೆಸಿ ನಂತರ ತೆಗೆದುಕೊಳ್ಳಲಾಗಿದೆ ಎಂದು ಹೇಳಿದ್ದಾರೆ.
ರಾಹುಲ್ ಗಾಂಧಿಯನ್ನು ಪ್ರಧಾನಿ ಅಭ್ಯರ್ಥಿಯನ್ನಾಗಿ ಮಾಡಲು ಕಾಂಗ್ರೆಸ್ ನಿರ್ಧರಿಸಿದೆ ಎಂದು ಗೆಹ್ಲೋಟ್ ಹೇಳಿದ್ದಾರೆ. ಐಎನ್ಡಿಐಎ ಮೈತ್ರಿಯ ಅಗತ್ಯತೆಯ ಕುರಿತು ಮಾತನಾಡಿದ ಅವರು, ಪ್ರತಿ ಚುನಾವಣೆಯಲ್ಲಿ ಸ್ಥಳೀಯ ಅಂಶಗಳೇ ಮುಖ್ಯವಾಗಿರುತ್ತದೆ. ಆದರೆ ದೇಶದ ಪ್ರಸ್ತುತ ಪರಿಸ್ಥಿತಿ ಎಲ್ಲಾ ಪಕ್ಷಗಳ ಮೇಲೆ ಅಗಾಧವಾದ ಒತ್ತಡವನ್ನು ಸೃಷ್ಟಿಸಿದೆ ಎಂದು ಹೇಳಿದರು.
ಸಾರ್ವಜನಿಕರು ಇಂತಹ ಒತ್ತಡ ಸೃಷ್ಟಿಸಿದ್ದು, ಎಲ್ಲ ಪಕ್ಷಗಳ ಮೈತ್ರಿಗೆ ಕಾರಣವಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಅಹಂಕಾರಿ ಆಗಬಾರದು. 2014 ರಲ್ಲಿ ಬಿಜೆಪಿ ಕೇವಲ 31% ಮತಗಳಿಂದ ಅಧಿಕಾರಕ್ಕೆ ಬಂದಿದ್ದರಿಂದ ಪ್ರಧಾನಿ ಮೋದಿ ದುರಹಂಕಾರಿಯಾಗಬಾರದು. ಉಳಿದ 69% ಅವರ ವಿರುದ್ಧವಾಗಿದೆ ಎಂದು ಹೇಳಿದರು.

Loading

Leave a Reply

Your email address will not be published. Required fields are marked *