ಕಾಂಗ್ರೆಸ್ ಸರ್ಕಾರ ಅಡಳಿತದಲ್ಲಿ ಸಂಪೂರ್ಣ ವಿಫಲ -ಕೋಟ ಶ್ರೀನಿವಾಸ್ ಪೂಜಾರಿ

ಮಂಗಳೂರು:- ಬರ ವಿಚಾರದಲ್ಲಿ ಕೇಂದ್ರ ಸರ್ಕಾರದ ಮೇಲೆ ಗೂಬೆ ಬೇಡ ಎಂದು ಮಾಜಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಹೇಳಿದ್ದಾರೆ.

ಈ ಸಂಬಂಧ BC ಮಾತನಾಡಿದ ಅವರು ಬರದ ವಿಚಾರದಲ್ಲಿ ರಾಜ್ಯ ಸರ್ಕಾರ ಕೇಂದ್ರವನ್ನ ದೂರುತ್ತಿದೆ. ಅದರ ಬದಲು ರಾಜ್ಯ ಸರ್ಕಾರವೇ 10 ಸಾವಿರ ಕೋಟಿ ರು.

ಘೋಷಿಸಲಿ, ಕೇಂದ್ರ ಸರ್ಕಾರದ ಜತೆ ನಾವು ನೀವು ಒಟ್ಟಾಗಿ ಮಾತನಾಡೋಣ. ಕೇಂದ್ರದ ಮೇಲೆ ಗೂಬೆ ಕೂರಿಸುವ ಕೆಲಸ ಮಾಡಬೇಡಿ ಎಂದರು.

ಯುವನಿಧಿ ಯೋಜನೆಯಲ್ಲಿ ಪದವಿ ಪಡೆದ ಎಲ್ಲ ನಿರುದ್ಯೋಗಿಗಳಿಗೆ ಹಣ ಕೊಡುತ್ತೇವೆ ಎಂದು ಹೇಳಿದ್ದರು.

ಆದರೆ ಈಗ 2022-23ರಲ್ಲಿ ಪದವಿ ಪೂರೈಸಿದ ನಿರುದ್ಯೋಗಿಗಳಿಗೆ ಮಾತ್ರ ಎನ್ನುತ್ತಿದ್ದಾರೆ. ಕರ್ನಾಟಕ ಸರ್ಕಾರ ಆಡಳಿತದಲ್ಲಿ ವಿಫಲವಾಗಿ ಅಸಹಾಯಕವಾಗಿದೆ. ಬರ ನಿರ್ವಹಣೆ,‌ ಕಾನೂನು ಸುವ್ಯವಸ್ಥೆ ಎಲ್ಲ ವಿಚಾರದಲ್ಲಿ ಸರ್ಕಾರ ವಿಫಲವಾಗಿದೆ. ಆರ್‌ಎಸ್‌ಎಸ್‌ ಮುಖಂಡ ಡಾ. ಕಲ್ಲಡ್ಕ ಪ್ರಭಾಕರ ಭಟ್, ಮೈಸೂರು ಸಂಸದ ಪ್ರತಾಪ್ ಸಿಂಹ ಅವರನ್ನು ಬಂಧಿಸುವ ವಿಚಾರದಲ್ಲಿ ಸರ್ಕಾರ ಮುಳುಗಿದೆ ಎಂದರು. ಶಾಸಕ ಬಸನಗೌಡ ಪಾಟೀಳ್‌ ಯತ್ನಾಳರ ಹೇಳಿಕೆ ಪ್ರಕರಣ ನಮ್ಮ ವರಿಷ್ಠರ ಮುಂದಿದೆ. ಅವರು ಯಾವ ಕ್ರಮ ತೆಗೆದುಕೊಳ್ಳುತ್ತಾರೆ ಎಂಬುದನ್ನು ನಾವು ಕಾಯುತ್ತಿದ್ದೇವೆ. ಬಹಳ ದಿನಗಳಿಂದ ಇಂಥದ್ದೆಲ್ಲ ನಡೆಯುತ್ತಿದೆ. ಸದ್ಯದಲ್ಲೇ ಅದೆಲ್ಲಾ ಅಂತ್ಯ ಕಾಣುತ್ತದೆ ಎಂದರು.

Loading

Leave a Reply

Your email address will not be published. Required fields are marked *