ರಾಜ್ಯದ ಕಾಂಗ್ರೆಸ್ ಸರ್ಕಾರ ದ್ವೇಷದ ರಾಜಕಾರಣ ಮಾಡುತ್ತಿದೆ -ಬಿ.ಶ್ರೀರಾಮುಲು

ಬೆಂಗಳೂರು:- ರಾಜ್ಯದ ಕಾಂಗ್ರೆಸ್ ಸರ್ಕಾರ ದ್ವೇಷದ ರಾಜಕಾರಣ ಮಾಡುತ್ತಿದೆ ಎಂದು ಮಾಜಿ ಸಚಿವ ಬಿ.ಶ್ರೀರಾಮುಲು ಹರಿಹಾಯ್ದಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸುನೀಲ್‌ಕುಮಾರ್‌, ರಾಜ್ಯದ ಎಲ್ಲ ಕರಸೇವಕರ ಪಟ್ಟಿಯನ್ನು ಕೊಡುವೆ. ನಿಮ್ಮ ಸರಕಾರಕ್ಕೆ ಮತ್ತು ನಿಮಗೆ ತಾಕತ್ತಿದ್ದರೆ ಎಲ್ಲ ರಾಮಕರಸೇವಕರನ್ನು ಬಂಧನ ಮಾಡಿ ನೋಡಿ ಎಂದರು.

ರಾಮ ಮಂದಿರ ನಿರ್ಮಾಣ ಆಗುತ್ತಿರುವುದು ಕಾಂಗ್ರೆಸ್‌ನವರಿಗೆ ಸಹಿಸಲು ಆಗುತ್ತಿಲ್ಲ. ಹಿಂದೂ ಕಾರ್ಯಕರ್ತರನ್ನು ಬಂಧಿಸುವುದರ ಹಿಂದಿನ ಉದ್ದೇಶ ಏನು ಎಂದರು.

ಕಾಂಗ್ರೆಸ್ ಸರ್ಕಾರವು ಸುಮಾರು 31 ವರ್ಷಗಳಷ್ಟು ಹಳೆಯ ಕೇಸುಗಳನ್ನು ತೆಗೆದು ಹಿಂದೂಗಳನ್ನು ಬಂಧಿಸುತ್ತಿದೆ. ಇದು ಹಿಂದೂ ವಿರೋಧಿ ಸರ್ಕಾರ ಎಂದು ಮಾಜಿ ಸಚಿವ ಶ್ರೀರಾಮುಲು ವಾಗ್ದಾಳಿ ನಡೆಸಿದ್ದಾರೆ. ರಾಮಮಂದಿರದಲ್ಲಿ ಪ್ರಾಣ ಪ್ರತಿಷ್ಠಾಪನೆಯ ಸಂದರ್ಭದಲ್ಲಿ ದೇಶಾದ್ಯಂತ ಮಂಗಳಕರ ವಾತಾವರಣವಿದೆ. ಆದರೆ, ಅಪಶಕುನ ಸೃಷ್ಟಿಗೆ ಸಿದ್ದರಾಮಯ್ಯನವರು ಮುಂದಾಗಿದ್ದಾರೆ. 32 ವರ್ಷಗಳ ಹಿಂದೆ ಕರಸೇವೆಯಲ್ಲಿ ಭಾಗವಹಿಸಿದ್ದ ಹುಬ್ಬಳ್ಳಿಯ ಕಾರ್ಯಕರ್ತರನ್ನು ಬಂಧನ ಮಾಡಿ ರಾವಣ ಮಾತ್ರ ರಾಮವಿರೋಧಿಯಲ್ಲ; ತಾನು ಕೂಡ ರಾಮ ವಿರೋಧಿ ಎಂಬುದನ್ನು ಕಾಂಗ್ರೆಸ್ ಸರ್ಕಾರ ಸಾಬೀತುಪಡಿಸಿ ಎಂದು ಟೀಕಿಸಿದರು.

Loading

Leave a Reply

Your email address will not be published. Required fields are marked *