ಮಂಗಳೂರು: ಕರ್ನಾಟಕ ಮಾಡಲ್ ಬಗ್ಗೆ ಸಿಎಂ ಸಿದ್ದರಾಮಯ್ಯ ಹೇಳಿಕೆ ವಿಚಾರ ಸಂಬಂಧ ಮಂಗಳೂರಿನಲ್ಲಿ ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ಕಟೀಲು ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್ಸಿಗರು ಆಶ್ವಾಸನೆ ಮೂಲಕವೇ ದೇಶವನ್ನು ಮುನ್ನಡೆಸಿದ್ದಾರೆ. ಮೋದಿ ಪ್ರಧಾನಿಯಾದ ಬಳಿಕ ವಿಕಾಸದ ಯಾತ್ರೆ ನಡೆಯುತ್ತಿದೆ. ಆದ್ರೆ ಕಾಂಗ್ರೆಸ್ನ ಗ್ಯಾರಂಟಿಗಳಿಂದ ಅಭಿವೃದ್ಧಿ ಕುಂಠಿತವಾಗುತ್ತದೆ. ಶ್ರೀಲಂಕಾ, ಪಾಕಿಸ್ತಾನದಲ್ಲಿ ಏನಾಗಿದೆ ಎಂದು ನಾವು ನೋಡಿದ್ದೇವೆ. ಈ ದೇಶವನ್ನು ಸಿದ್ದರಾಮಯ್ಯ ಯಾವ ಕಡೆ ಕೊಂಡೊಯ್ಯುತ್ತಾರೆ ಎಂದು ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ಕಟೀಲು ಪ್ರಶ್ನೆ ಮಾಡಿದರು.