ಬೆಂಗಳೂರು: ಕಾಂಗ್ರೆಸ್ ಸೇರ್ಪಡೆಯಾಗಿ ಎಂದು ಯಾರಿಗೂ ಒತ್ತಡ ಹಾಕುತ್ತಿಲ್ಲ ಎಂದು ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಎಂಎಲ್ಸಿ ಜಗದೀಶ್ ಶೆಟ್ಟರ್ ಹೇಳಿದ್ದಾರೆ. 5 ರಾಜ್ಯಗಳ ಚುನಾವಣೆ ಸೆಮಿಫೈನಲ್, ಲೋಕಸಭೆ ಚುನಾವಣೆ ಫೈನಲ್. ವಾಲೆಂಟರಿಯಾಗಿ ಬಿಜೆಪಿ ನಾಯಕರು ನಮ್ಮನ್ನು ಸಂಪರ್ಕಿಸುತ್ತಿದ್ದಾರೆ. ರಾಜ್ಯ, ದೇಶದಲ್ಲಿ ರಾಜಕೀಯ ಧ್ರುವೀಕರಣ ಶುರುವಾಗಿದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ರಾಜಕೀಯ ಧ್ರುವೀಕರಣ ಆಗಲಿದೆ ಎಂದರು.