ಕಾಂಗ್ರೆಸ್ ಪಕ್ಷ ಆಶ್ವಾಸನೆ ವಿಚಾರದಲ್ಲಿ ಬಣ್ಣ ಬದಲಿಸುತ್ತಿದೆ ಕಾಂಗ್ರೆಸ್ ಪಕ್ಷ – ಸಿ.ಟಿ ರವಿ

ಬೆಂಗಳೂರು: ಕಾಂಗ್ರೆಸ್ ಪಕ್ಷವು ಅಧಿಕಾರಕ್ಕೆ ಏರಿದ ಒಂದು ದಿನಕ್ಕೇ ತನ್ನ ಆಶ್ವಾಸನೆ ವಿಚಾರದಲ್ಲಿ ಬಣ್ಣ ಬದಲಿಸುತ್ತಿದೆ. ದಿನಗಳು ಕಳೆದಂತೆ ಅದ್ಯಾವ ರೀತಿ ಬಣ್ಣ ಬದಲಿಸಲಿದ್ದಾರೆ ಎಂಬುದು ಇದರಿಂದ ಸ್ಪಷ್ಟವಾಗಲಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರು ಆಕ್ಷೇಪಿಸಿದರು.

 

ಬಿಜೆಪಿ ರಾಜ್ಯ ಕಾರ್ಯಾಲಯ ‘ಜಗನ್ನಾಥ ಭವನ’ದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಪತ್ರಕರ್ತರ ಪ್ರಶ್ನೆಗಳಿಗೆ ಉತ್ತರ ನೀಡಿದರು. ನುಡಿದಂತೆ ನಡೆಯಿರಿ ಎಂದು ಕಾಂಗ್ರೆಸ್ ಸರಕಾರವನ್ನು ಆಗ್ರಹಿಸುವುದಾಗಿ ತಿಳಿಸಿದರು.

ಎಲ್ಲ ನಿರುದ್ಯೋಗಿಗಳಿಗೆ 3 ಸಾವಿರ ರೂಪಾಯಿ ಎಂದು ಕಾಂಗ್ರೆಸ್‍ನವರು ಹೇಳಿದ್ದರು. ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಅವರು ಹಲವಾರು ಭಾಷಣಗಳಲ್ಲಿ ‘ಎಲ್ಲ ನಿರುದ್ಯೋಗಿ ಯುವಕರಿಗೆ 3 ಸಾವಿರ’ ಎಂದಿದ್ದರು. ಐಟಿಐ ಆದವರಿಗೆ 1,500 ಎಂದಿದ್ದರು. ಈಗ ‘2022-23ರಲ್ಲಿ ಪದವಿ ಪಡೆದವರಿಗೆ’ ಎನ್ನುತ್ತಿದ್ದಾರೆ. ಖಾಸಗಿ ನೌಕರಿ ಮಾಡುತ್ತಿದ್ದರೆ ಭತ್ಯೆ ಇಲ್ಲ ಎನ್ನುತ್ತಿದ್ದಾರೆ ಎಂದು ಟೀಕಿಸಿದರು.

ಕಾಂಗ್ರೆಸ್ ಪಕ್ಷವು ಘೋಷಿಸಿದಂತೆ ಪ್ರತಿ ಮನೆಗೆ ಗೃಹಿಣಿಯರಿಗೆ 2 ಸಾವಿರ ನೀಡಲೇಬೇಕು. 200 ಯೂನಿಟ್ ವಿದ್ಯುತ್ ಉಚಿತ ಕೊಡಲೇಬೇಕು. ಮಹಿಳೆಯರಿಗೆ ಬಸ್ ಚಾರ್ಜ್ ಉಚಿತ ಎಂದಿದ್ದೀರಿ; ಅದನ್ನು ಕೊಡಲೇಬೇಕು. ಬಿಪಿಎಲ್ ಕಾರ್ಡ್‍ದಾರರಿಗೆ 10 ಕೆಜಿ ಅಕ್ಕಿ ಕೊಡಲೇಬೇಕು. ಮುಖ್ಯಮಂತ್ರಿಗಳೇ ಹೇಳಿದ ಮೇಲೆ ಯಾರೋ ಬಿಲ್ ಕಲೆಕ್ಟರ್ ಬಂದು ಬಿಲ್ ಕೇಳಿದರೆ, ಆ ಧೈರ್ಯ ಮಾಡಿದರೆ ಅದು ಸಿಎಂ ಆದೇಶಕ್ಕೆ ವಿರುದ್ಧವಾಗುತ್ತದೆ. ಮುಖ್ಯಮಂತ್ರಿಗಳೇ ಹೇಳಿದ್ದಾರೆ. ಹುಷಾರ್; ಬಿಲ್ ಮುಖ್ಯಮಂತ್ರಿಗಳಿಗೆ ಕಳಿಸಿ ಎನ್ನಬೇಕು. ಯಾರೂ ವಿದ್ಯುತ್ ಬಿಲ್ ಕಟ್ಟಬಾರದು ಎಂದು ತಿಳಿಸಿದರು.

Loading

Leave a Reply

Your email address will not be published. Required fields are marked *