ಬೆಂಗಳೂರು : ರಾಜ್ಯದ ಕೆಲವು ಕಡೆ ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ ನಡೆದಿದ್ದು, ಈ ಕುರಿತು ನಳೀನ್ ಕುಮಾರ್ ಕಟೀಲ್ ಪ್ರತಿಕ್ರಿಯೆ ನೀಡಿದ್ದಾರೆ.
ಈ ಬಗ್ಗೆ ಮಾತನಾಡಿರುವ ನಳೀನ್ ಕುಮಾರ್ ಕಟೀಲ್ ರಾಜ್ಯದ ವಿವಿಧ ಕಡೆಗಳಲ್ಲಿ `ಹಿಂಸಾ ಗ್ಯಾರಂಟಿ ಸ್ಕೀಮ್’ ಅನ್ನು ಜಾರಿಗೆ ತಂದಿದೆ.
ಹೊಸಕೋಟೆ ಸೇರಿದಂತೆ ರಾಜ್ಯದ ವಿವಿಧೆಡೆಗಳಲ್ಲಿ ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆ ನಡೆದಿದೆ. . ಹೊಸಕೋಟೆಯಲ್ಲಿ ಒಬ್ಬ ಕಾರ್ಯಕರ್ತರನ್ನು ಹತ್ಯೆ ಮಾಡಿದ್ದು. ಇದು ಅತ್ಯಂತ ಖಂಡನೀಯ ಎಂದಿದ್ದಾರೆ.
ರಾಜ್ಯದ ವಿವಿಧ ಕಡೆಗಳಲ್ಲಿ ದೇಶದ್ರೋಹಿ ಚಟುವಟಿಕೆಗಳು ಹೆಚ್ಚಾಗಿವೆ.. ಪಾಕಿಸ್ತಾನದ ಧ್ವಜ ಹಾರಿಸುವುದು ದೇಶದ್ರೋಹದ ಚಟುವಟಿಕೆಯಾಗಿದೆ. ಕಾಂಗ್ರೆಸ್ ನಾಯಕರು ಇಂತಹ ಹಿಂಸಾಚಾರದ ಪ್ರವೃತ್ತಿಗೆ ಆಸ್ಪದ ಕೊಡಬಾರದು.ಕಠಿಣ ಕ್ರಮ ಕೈಗೊಳ್ಳಬೇಕು ಎಂದಿದ್ದಾರೆ. ಹಿಂಸೆಯನ್ನು ಪ್ರಚೋದಿಸುವವರು ಮತ್ತು ದೇಶದ್ರೋಹಿ ಚಟುವಟಿಕೆಗಳಿಗೆ ಬೆಂಬಲ ನೀಡುವವರನ್ನು ಬಂಧಿಸಬೇಕು ಎಂದು ಕಟೀಲ್ ಸೂಚನೆ ನೀಡಿದ್ದಾರೆ.