ಹುಬ್ಬಳ್ಳಿ: ಕಾಂಗ್ರೆಸ್ʼನವರಿಂದಲೇ ಸರ್ಕಾರ ಪತನವಾಗಲಿದೆ ಎಂದು ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಮುಂದಿನ ದಿನಗಳಲ್ಲಿ ಹೆಚ್ಡಿ ಕುಮಾರಸ್ವಾಮಿ ಅವರು ನೂರಕ್ಕೆ ನೂರರಷ್ಟು ಮುಖ್ಯಮಂತ್ರಿ ಆಗುತ್ತಾರೆ. ‘ಕೈ’ ಶಾಸಕರಾದ ಬಿ.ಆರ್.ಪಾಟೀಲ್, ರಾಜು ಕಾಗೆ, ಕಂಪ್ಲಿ ಗಣೇಶ್, ಬಸವರಾಜ ರಾಯರೆಡ್ಡಿ ಸರ್ಕಾರದ ವಿರುದ್ಧವೇ ಮಾತನಾಡುತ್ತಿದ್ದಾರೆ.
ಹೀಗಾಗಿ ಕಾಂಗ್ರೆಸ್ನವರೇ ಸರ್ಕಾರ ಬೀಳಿಸುತ್ತಾರೆ. ಕಾಂಗ್ರೆಸ್ ನಾಯಕರು ಜೆಡಿಎಸ್ ಪಕ್ಷವನ್ನು ದಕ್ಷಿಣ ಕರ್ನಾಟಕಕ್ಕೆ ಸೀಮಿತ ಎಂದು ಬಿಂಬಿಸಿದ್ದರು. ಆದರೆ ನಾವು ಕಲ್ಯಾಣ ಕರ್ನಾಟಕ, ಕಿತ್ತೂರ ಕರ್ನಾಟಕ ಭಾಗದಲ್ಲಿ ಬಲಿಷ್ಠವಾಗಿದ್ದೇವೆ. ಕುಮಾರಣ್ಣ ಅವರನ್ನ ಮುಖ್ಯಮಂತ್ರಿ ಮಾಡಲು ಜೆಡಿಎಸ್ ಪುನಶ್ಚೇತನ ಕಾರ್ಯಕ್ರಮ ಮಾಡುತ್ತಿದ್ದೇವೆ ಎಂದರು. ಇದೇ ವೇಳೆ ಮೋದಿ, ಯಡಿಯೂರಪ್ಪ, ಬೊಮ್ಮಾಯಿ ಅವರನ್ನು ಹಾಡಿಹೊಗಳಿದರು.