‘ನನ್ನ ಅಧ್ಯಕ್ಷತೆಯಲ್ಲೇ ಕಾಂಗ್ರೆಸ್ 135 ಸ್ಥಾನ ಗೆದ್ದಿದೆ’ : ಸಿದ್ದರಾಮಯ್ಯಗೆ ಟಾಂಗ್ ನೀಡಿದ ಡಿಕೆಶಿ

ಬೆಂಗಳೂರು : ನನ್ನ ಅಧ್ಯಕ್ಷತೆಯಲ್ಲಿ ಕಾಂಗ್ರೆಸ್ 135 ಸ್ಥಾನ ಗೆದ್ದಿದೆ , ಯಾರ ನಂಬರ್ ಬಗ್ಗೆ ಮಾತನಾಡಲು ಹೋಗಲ್ಲ ಎಂದು ಡಿಕೆ ಶಿವಕುಮಾರ್ ಹೇಳಿದರು.ಬೆಂಗಳೂರಿನಲ್ಲಿ ತಮ್ಮ ನಿವಾಸದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಡಿಕೆ ಶಿವಕುಮಾರ್ ಗೆದ್ದಿರುವ 135 ಶಾಸಕರ ಬೆಂಬಲ ಯಾರಿಗೆ ಎನ್ನುವ ಪ್ರಶ್ನೆ ಕಾಂಗ್ರೆಸ್ ಪಾಳಯದಲ್ಲಿ ಎದ್ದಿದೆ.ಇದರ ನಡುವೆ ನನ್ನ ಅಧ್ಯಕ್ಷತೆಯಲ್ಲಿ ಕಾಂಗ್ರೆಸ್ 135 ಸ್ಥಾನ ಗೆದ್ದಿದೆ , ಯಾರ ನಂಬರ್ ಬಗ್ಗೆ ಮಾತನಾಡಲು ಹೋಗಲ್ಲ ಎಂದು ಡಿಕೆ ಶಿವಕುಮಾರ್ ಹೇಳಿದರು.

ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಮುಖ್ಯಮಂತ್ರಿ ಆಯ್ಕೆ ನಿರ್ಧಾರವನ್ನು ಹೈಕಮಾಂಡ್ ನಾಯಕರಿಗೆ ಬಿಡುವ ಒಂದು ಸಾಲಿನ ನಿರ್ಣಯಕ್ಕೆ ಎಲ್ಲಾ ಶಾಸಕರು ಸರ್ವಾನುಮತದಿಂದ ಒಪ್ಪಿಗೆ ನೀಡಿದ್ದಾರೆ. ಕಾಂಗ್ರೆಸ್ ಸಂಪ್ರದಾಯದಂತೆ ಎಲ್ಲಾ ಶಾಸಕರ ಅಭಿಪ್ರಾಯವನ್ನು ಸಂಗ್ರಹಿಸಲಾಗಿದೆ. ನಾನು ದೆಹಲಿಗೆ ಹೋಗಬೇಕು ಎಂಬ ವಿಚಾರ ಇದೆ. ನಮ್ಮ ಮನೆಯಲ್ಲಿ ಪೂಜೆ ಪುನಸ್ಕಾರಗಳನ್ನು ಹಮ್ಮಿಕೊಂಡಿದ್ದು, ಹೀಗಾಗಿ ದೆಹಲಿಗೆ ಹೋಗುವ ಬಗ್ಗೆ ನಾನು ಇನ್ನೂ ತೀರ್ಮಾನ ಮಾಡಿಲ್ಲ ಎಂದರು.

ನಿಮ್ಮ ಹುಟ್ಟುಹಬ್ಬದ ದಿನ ಹೈಕಮಾಂಡ್ ನಿಮಗೆ ಉಡುಗೊರೆ ನೀಡುವುದೇ ಎಂದು ಕೇಳಿದ ಪ್ರಶ್ನೆಗೆ, ‘ಹೈಕಮಾಂಡ್ ಉಡುಗೊರೆ ನೀಡುತ್ತದೆಯೋ ಇಲ್ಲವೋ, ಆದರೆ ರಾಜ್ಯದ ಜನ ನನ್ನ ಮೇಲೆ ವಿಶ್ವಾಸ ಇಟ್ಟು ನನ್ನ ಅಧ್ಯಕ್ಷತೆಯಲ್ಲಿ ಪಕ್ಷವನ್ನು 135 ಸ್ಥಾನಗಳ ಬಹುದೊಡ್ಡ ಬಹುಮತದಿಂದ ಗೆಲ್ಲಿಸಿದ್ದಾರೆ. ಇದಕ್ಕಿಂತ ದೊಡ್ಡ ಉಡುಗೋರೆ ನಿರೀಕ್ಷಿಸಲು ಸಾಧ್ಯವೇ? ಅಧಿಕಾರ ಇಲ್ಲದಿದ್ದರೂ, ಎಲ್ಲಾ ಕಿರುಕುಳ, ಸವಾಲುಗಳನ್ನು ಎದುರಿಸಿ, ಈ ಡಬಲ್ ಇಂಜಿನ್ ಸರ್ಕಾರಗಳನ್ನು ಎದುರಿಸಿ ಪಕ್ಷವನ್ನು ಸಂಘಟನೆ ಮಾಡಿದ್ದೇನೆ’ ಎಂದು ತಿಳಿಸಿದರು.

 

Loading

Leave a Reply

Your email address will not be published. Required fields are marked *