ಮುಂದಿನ 5 ವರ್ಷಗಳಲ್ಲಿ 2 ಕೋಟಿ ಹೆಚ್ಚಿನ ಮನೆಗಳನ್ನು ನಿರ್ಮಾಣ: ನಿರ್ಮಲಾ ಸೀತಾರಾಮನ್‌

ನವದೆಹಲಿ: ಜೈಜವಾನ್, ಜೈಕಿಸಾನ್, ಜೈವಿಜ್ಞಾನ, ಜೈ ಅನುಸಂಧಾನ ಎಂಬ ಪ್ರಧಾನಿ ಮೋದಿ ಅವರ ಘೋಷಣೆಯಡಿ ಕಾರ್ಯನಿರ್ವಹಿಸುತ್ತೇವೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಬಜೆಟ್‌ನಲ್ಲಿ ಹೇಳಿದ್ದಾರೆ. ಬಡವರು, ಮಹಿಳೆಯರು, ಯುವಜನತೆ ಮತ್ತು ರೈತರು ನಮ್ಮ ಸರ್ಕಾರದ 4 ಜಾತಿಗಳು. ಈ ನಾಲ್ಕು ಜಾತಿಗಳ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ ಎಂದು ಹೇಳಿದರು.ಕೋವಿಡ್‌ ಸವಾಲುಗಳ ನಡುವೆಯೂ, ಪ್ರಧಾನಮಂತ್ರಿ ಆವಾಸ್ ಯೋಜನೆ ಗ್ರಾಮೀಣ ಅನುಷ್ಠಾನವು ಮುಂದುವರೆದಿದೆ ಮತ್ತು ನಾವು 3 ಕೋಟಿ ಮನೆಗಳ ಗುರಿಯನ್ನು ಸಾಧಿಸುವ ಸಮೀಪದಲ್ಲಿ ಇದ್ದೇವೆ. ಕುಟುಂಬಗಳ ಸಂಖ್ಯೆಯಲ್ಲಿನ ಹೆಚ್ಚಳದಿಂದ ಉಂಟಾಗುವ ಅವಶ್ಯಕತೆಗಳನ್ನು ಪೂರೈಸಲು ಮುಂದಿನ 5 ವರ್ಷಗಳಲ್ಲಿ 2 ಕೋಟಿ ಹೆಚ್ಚಿನ ಮನೆಗಳನ್ನು ನಿರ್ಮಾಣ ಮಾಡಲಾಗುವುದು ಎಂದು ಘೋಷಿಸಿದರು.
ಪ್ರಧಾನಮಂತ್ರಿ ಮುದ್ರಾ ಯೋಜನೆಯ ಅಡಿ 43 ಕೋಟಿ ರೂ.ಗಳ ಸಾಲವನ್ನು ಮಂಜೂರು ಮಾಡಿದೆ. ಸ್ಟಾರ್ಟ್‌ಅಪ್ ಇಂಡಿಯಾ ಮತ್ತು ಸ್ಟಾರ್ಟ್‌ಅಪ್ ಕ್ರೆಡಿಟ್ ಗ್ಯಾರಂಟಿ ಯೋಜನೆಗಳು ನಮ್ಮ ಯುವಕರಿಗೆ ಸಹಾಯ ಮಾಡುತ್ತಿವೆ ಎಂದು ತಿಳಿಸಿದರು.

Loading

Leave a Reply

Your email address will not be published. Required fields are marked *