ಬೆಂಗಳೂರು : ಕರ್ನಾಟಕ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಭರ್ಜರಿ ಗೆಲುವು ಸಾಧಿಸಿದ್ದು, ಇದೀಗ ಸಿಎಂ ಹುದ್ದೆಗೆ ಪೈಪೋಟಿ ಶುರುವಾಗಿದ್ದು, ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಅಲ್ಲದೇ ಇದೀಗ ಮತ್ತೊಂದು ಅಚ್ಚರಿಯ ಹೆಸರು ಕೇಳಿಬರುತ್ತಿದೆ.
ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಅವರು ಸಿಎಂ ಹುದ್ದೆಗಾಗಿ ಪೈಪೋಟಿ ಶುರುವಾಗಿದ್ದು, ಇಬ್ಬರೂ ಸಿಎಂ ಸ್ಥಾನಕ್ಕೆ ಪಟ್ಟು ಹಿಡಿದಿದ್ದಾರೆ. ಇಬ್ಬರೂ ನಾಯಕರು ಪಟ್ಟು ಸಡಿಲಿಸಿದಿದ್ದರೆ ಮೂರನೇ ಆಯ್ಕೆಯಾಗಿ ಲಿಂಗಾಯಿತ ಸಮುದಾಯದ ಎಂ.ಬಿ. ಪಾಟೀಲ್ ಅವರಿಗೆ ಸಿಎಂ ಸ್ಥಾನ ನೀಡುವ ಚರ್ಚೆ ನಡೆದಿದೆ ಎಂದು ಹೇಳಲಾಗಿದೆ.
ಸಿದ್ದರಾಮಯ್ಯ ಅವರು ಈಗಾಗಲೇ ಮುಖ್ಯಮಂತ್ರಿಯಾಗಿದ್ದು, ಕೆಪಿಸಿಸಿ ಅಧ್ಯಕ್ಷರಾಗಿರುವ ಡಿ.ಕೆ. ಶಿವಕುಮಾರ್ ಒಕ್ಕಲಿಗ ಸಮುದಾಯದವರಾಗಿದ್ದಾರೆ. ಈ ಬಾರಿ ಕಾಂಗ್ರೆಸ್ ಗೆ ಲಿಂಗಾಯತರು ಹೆಚ್ಚಿನ ಬೆಂಬಲ ನೀಡಿದ್ದಾರೆ. ಪ್ರಮುಖವಾಗಿ ಲಿಂಗಾಯಿತ ಸಮುದಾಯದ ಮತ ಕ್ರೂಢೀಕರಣಕ್ಕೆ ಮಾಜಿ ಸಚಿವ ಎಂ.ಬಿ. ಪಾಟೀಲ್ ಭಾರಿ ಪ್ರಯತ್ನವನ್ನೇ ಮಾಡಿದ್ದಾರೆ. ಹೀಗಾಗಿ ಸಿಎಂ ರೇಸ್ ನಲ್ಲಿ ಇದೀಗ ಎಂ.ಬಿ.ಪಾಟೀಲ್ ಅವರ ಹೆಸರೂ ಕೇಳಿಬರುತ್ತಿದೆ.