ಮತ್ತೆ ಕೊರೊನಾ ಆರ್ಭಟ: ರಾಜ್ಯದಲ್ಲಿಂದು 24 ಮಂದಿಗೆ ಕೊರೊನಾ ಪಾಸಿಟಿವ್‌!

ಬೆಂಗಳೂರು: ರಾಜ್ಯದಲ್ಲಿ ಮತ್ತೆ ಕೊರೊನಾ (Covid-19) ಆರ್ಭಟ ಹೆಚ್ಚಾಗಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ 24 ಕೋವಿಡ್‌ ಪಾಸಿಟಿವ್‌ ಪ್ರಕರಣಗಳು ದೃಢಪಟ್ಟಿವೆ. ಆ ಮೂಲಕ ಸೋಂಕಿತರ ಸಂಖ್ಯೆ ಶತಕ ದಾಟಿದೆ.

ರಾಜ್ಯದಲ್ಲಿ ಕೊರೊನಾ ಸಕ್ರಿಯ ಪ್ರಕರಣಗಳ ಸಂಖ್ಯೆ 105 ಕ್ಕೆ ಏರಿದೆ.

ಇದುವರೆಗೆ 11 ಮಂದಿ ಗುಣಮುಖರಾಗಿ ಡಿಸ್ಚಾರ್ಜ್‌ ಆಗಿದ್ದಾರೆ. ಇಂದು ಯಾವುದೇ ಸಾವು ಪ್ರಕರಣ ವರದಿಯಾಗಿಲ್ಲ ಎಂದು ಆರೋಗ್ಯ ಇಲಾಖೆ ಪ್ರಕಟಣೆ ತಿಳಿಸಿದೆ.

ಇಂದು ಇಬ್ಬರನ್ನು ಐಸಿಯುಗೆ ದಾಖಲಿಸಲಾಗಿದೆ. ಬೆಂಗಳೂರಿನಲ್ಲಿ 23 ಹಾಗೂ ದಕ್ಷಿಣ ಕನ್ನಡ ಜಿಲ್ಲೆ 1 ಪಾಸಿಟಿವ್‌ ಪ್ರಕರಣ ದೃಢಪಟ್ಟಿದೆ.

ಕೆಲಕಾಲ ವಿರಾಮದ ನಂತರ ಕೊರೊನಾ ವೈರಸ್‌ನ ಹೊಸ ಉಪತಳಿ ಜೆಎನ್‌.1 ಕಾಲಿಟ್ಟಿದೆ. ಭಾರತದಲ್ಲೂ ಹೊಸ ತಳಿ ಸೋಂಕು ವ್ಯಾಪಕವಾಗಿ ಹರಡುತ್ತಿದೆ. ಅಗತ್ಯ ಕ್ರಮಗಳನ್ನು ವಹಿಸುವಂತೆ ರಾಜ್ಯಗಳಿಗೆ ಕೇಂದ್ರ ಸರ್ಕಾರ ಸೂಚನೆ ನೀಡಿದೆ.

Loading

Leave a Reply

Your email address will not be published. Required fields are marked *