ಮುಳಬಾಗಲು: ರಾಜ್ಯದ ಜನತೆ ಗ್ಯಾರಂಟಿ ಯೋಜನೆಗಳ ಕುರಿತು ತೀವ್ರ ಅಸಮಾಧಾನಗೊಂಡಿದ್ದು, ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕೆಲಸಗಳು ನಡೆಯುತ್ತಿಲ್ಲಇದರ ಬಗ್ಗೆ ಕಾಂಗ್ರೆಸ್ ಶಾಸಕರೇ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದರು. ರಾಜ್ಯ ಸರಕಾರ ಬೋಗಸ್ ಗ್ಯಾರಂಟಿಗಳ ಹೆಸರಿನಲ್ಲಿ ಭ್ರಷ್ಟಾಚಾರ ಮಾಡುತ್ತಿದೆ. ರಾಜ್ಯ ಸರಕಾರದ ಶೇ.40 ಕಮೀಷನ್ ಕುರಿತು ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಅವರೇ ಆರೋಪ ಮಾಡಿದ್ದಾರೆ ಎಂದರು.
ರಾಜ್ಯಕ್ಕೆ ಕೇಂದ್ರ ಸರಕಾರ ತೆರಿಗೆ ಕೊಡುವ ವಿಚಾರದಲ್ಲಿಅನ್ಯಾಯ ಆಗಿಲ್ಲ. ಕಳೆದ 10 ವರ್ಷಗಳಲ್ಲಿಕೇಂದ್ರ ಸರಕಾರ 2.61 ಲಕ್ಷ ಸಾವಿರ ಕೋಟಿ ರಾಜ್ಯಕ್ಕೆ ಕೊಟ್ಟಿದೆ. ಆದರೆ ಯುಪಿಎ ಸರಕಾರದಲ್ಲಿಕೇವಲ 60 ಸಾವಿರ ಕೋಟಿ ಮಾತ್ರ ನೀಡಲಾಗಿತ್ತು. ಈಗ ಕಾಂಗ್ರೆಸ್ʼನವರು ಸುಳ್ಳು ಹೇಳುತ್ತಾ ಜನರಲ್ಲಿಗೊಂದಲ ಮೂಡಿಸುತ್ತಿದೆ ಎಂದು ತಿಳಿಸಿದರು.