ನವದೆಹಲಿ : ಬಜರಂಗದಳ ಸಂಘಟನೆಯನ್ನು ಅಲ್ ಖೈದಾ ಸಂಘಟನೆಗೆ ಹೋಲಿಗೆ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ ಪಂಜಾಬ್ ಕೋರ್ಟ್ ಸಮನ್ಸ್ ನೀಡಿದೆ.
ಬಜರಂಗದಳವನ್ನು ಅಲ್ ಖೈದಾಗೆ ಹೋಲಿಕೆ ಮಾಡಿರುವ ಆರೋಪದ ಹಿನ್ನೆಲೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪಂಜಾಬ್ ನ ಸಂಗ್ರೂರ್ ನ್ಯಾಯಾಲಯ ಸಮನ್ಸ್ ನೀಡಿದ್ದು, ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದೆ.
ಇನ್ನು ಕರ್ನಾಟಕ ವಿಧಾನಸಭೆ ಚುನಾವಣೆಗೆ ಕರ್ನಾಟಕ ಕಾಂಗ್ರೆಸ್ ಪಕ್ಷವು ತನ್ನ ಪ್ರಣಾಳಿಕೆಯಲ್ಲಿ ಸಂವಿಧಾನ ವಿರೋಧಿ ಕೆಲಸ ಮಾಡುವ ಬಜರಂಗದಳ ಹಾಗೂ ಪಿಎಫ್ ಸಂಘಟನೆಗಳನ್ನು ನಿಷೇಧ ಮಾಡುವುದಾಗಿ ಹೇಳಿತ್ತು.
ಸಿದ್ದರಾಮಯ್ಯ’ ಮತ್ತೆ ಸಿಎಂ ಆಗಬೇಕೆಂದು ಎದೆ ಮೇಲೆ ಹಚ್ಚೆ ಹಾಕಿಸಿಕೊಂಡ ‘ಅಭಿಮಾನಿ
ರಾಜ್ಯ ರಾಜಕಾರಣದಲ್ಲಿ ಸದ್ಯ ಸಿಎಂ ಆಯ್ಕೆ ವಿಚಾರ ಬಹಳ ಕುತೂಹಲ ಕೆರಳಿಸಿದೆ. ಒಂದು ಕಡೆ ಡಿಕೆ ಶಿವಕುಮಾರ್ ಸಿಎಂ ಆಗಲಿ ಎಂದು ಅಭಿಮಾನಿಗಳು ಒತ್ತಾಯಿಸುತ್ತಿದ್ದರೆ, ಇನ್ನೊಂದು ಕಡೆ ಸಿದ್ದರಾಮಯ್ಯ ಸಿಎಂ ಆಗಲಿ ಎಂದು ಅವರ ಬೆಂಬಲಿಗರು, ಅಭಿಮಾನಿಗಳು ಒತ್ತಾಯ ಮಾಡುತ್ತಿದ್ದಾರೆ.