ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಆರೋಪಿ ದೋಷಮುಕ್ತ – CBI ಕೋರ್ಟ್

ಬೆಂಗಳೂರು: ಸೌಜನ್ಯ ಅತ್ಯಾಚಾರ ಮತ್ತು ಕೊಲೆ  ಪ್ರಕರಣದಲ್ಲಿ ಆರೋಪಿಯಾಗಿದ್ದ ಸಂತೋಷ್ ರಾವ್ನನ್ನು  ಕೋರ್ಟ್ ದೋಷಮುಕ್ತಗೊಳಿಸಿದೆ. ಸಿಬಿಐ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ್.ಸಿ.ಬಿ. ಇಂದು ತೀರ್ಪು ಪ್ರಕಟಿಸಿ, ಸಾಕ್ಷ್ಯಾಧಾರ ಕೊರತೆಯಿಂದ ಆರೋಪಿಯನ್ನು ಬಿಡುಗಡೆ ಮಾಡುವಂತೆ ಆದೇಶಿಸಿದ್ದಾರೆ. ಆರೋಪಿ ಪರ ವಕೀಲ ಮೋಹಿತ್ ಕುಮಾರ್ ವಾದ ಮಂಡಿಸಿದ್ದರು.
ಆರೋಪಿ ಪರ ವಾದ ಏನಿತ್ತು?
ಆತ್ಯಾಚಾರ ಹಾಗೂ ಕೊಲೆಯಾದ ವೇಳೆ ಆರೋಪಿ ಸ್ಥಳದಲ್ಲಿ ಇರಲಿಲ್ಲ. ರೇಪ್ ಮಾಡಿರುವ ಬಗ್ಗೆ ವೈದ್ಯಕೀಯ ವರದಿ ಇರಲಿಲ್ಲ. ಎರಡು ದಿನ ಬಳಿಕ ಆರೋಪಿಯನ್ನು ಬಂಧಿಸಲಾಗಿತ್ತು. ಸೌಜನ್ಯ ಮೃತಪಟ್ಟ ದಿನ ಭಾರೀ ಮಳೆ ಇತ್ತು. ಅಂದು 500 ಜನ ಹುಡುಕಾಟ ನಡೆಸಿದ್ದರು. ಆದರೆ ಅಂದು ಶವ ಪತ್ತೆಯಾಗಿರಲಿಲ್ಲ.
ನದಿ ದಾಟಿ ಹೋಗಿದ್ದಾನೆ ಎಂದು ಅನುಮಾನ ವ್ಯಕ್ತಪಡಿಸಿದ ಪೊಲೀಸರು ಎರಡು ದಿನದ ಬಳಿಕ ಸಂತೋಷ್ ರಾವ್ನನ್ನು ಬಂಧಿಸಿದ್ದರು. ಅಲ್ಲಿದ್ದ ಪ್ರಕೃತಿ ಚಿಕಿತ್ಸಾಲಯದ ಸಿಸಿಟಿವಿ ಸಂಗ್ರಹಿಸಿಲ್ಲ. ಮರಣೋತ್ತರ ಪರೀಕ್ಷೆಯಲ್ಲಿ ರಾತ್ರೋರಾತ್ರಿ ಕೆಟ್ಟ ಬೆಳಕಿನಲ್ಲಿ ಮಾಡಲಾಗಿದೆ. ಸಂತೋಷ್ ರಾವ್ ಕೊಲೆ ಮಾಡಿದ್ದಾನೆ ಎಂಬುದಕ್ಕೆ ಯಾವುದೇ ಸಾಕ್ಷ್ಯಗಳು ಇಲ್ಲ ಎಂದು ಹೇಮಂತ್ ವಾದಿಸಿದ್ದರು.

Loading

Leave a Reply

Your email address will not be published. Required fields are marked *