ಮಂಡ್ಯದಲ್ಲಿ ಮತ್ತೆ ಕೋವಿಡ್ ಕಾಟ: ಮದ್ದೂರಿನ ವ್ಯಕ್ತಿಯೊಬ್ಬನಿಗೆ ಪಾಸಿಟಿವ್

ಮಂಡ್ಯ:  ಕೇರಳ ರಾಜ್ಯದಲ್ಲಿ ಕೊರೊನಾ ವೈರಸ್​​ನ ಜೆಎನ್​​1 ರೂಪಾಂತರಿ ತಳಿಯಿಂದಾಗಿ ಸೋಂಕು ಹರಡುತ್ತಿದ್ದು, ರಾಜ್ಯದಲ್ಲಿಯೂ ಆತಂಕ ಸೃಷ್ಟಿಯಾಗಿದೆ. ಇಂಥ ಸಂದರ್ಭದಲ್ಲೇ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ವ್ಯಕ್ತಿಯೊಬ್ಬರಲ್ಲಿ ಕೋವಿಡ್-19 ಸೋಂಕು ದೃಢಪಟ್ಟಿದ್ದು ಆತಂಕಕ್ಕೆ ಕಾರಣವಾಗಿದೆ.

ಪ್ರಯಾಣದ ಇತಿಹಾಸ ಇಲ್ಲದಿದ್ದರೂ ವ್ಯಕ್ತಿಗೆ ಸೋಂಕು ತಗುಲಿದೆ. ಶಸ್ತ್ರಚಿಕಿತ್ಸೆಗಂದು ಆಸ್ಪತ್ರೆಗೆ ತೆರಳಿದ್ದಾಗ ಪರೀಕ್ಷೆ ನಡೆಸಿದ ವೇಳೆ ಕೊವಿಡ್ ಧೃಡಪಟ್ಟಿದೆ. ಸೋಂಕಿತ ವ್ಯಕ್ತಿಯಲ್ಲಿ ಯಾವ ರೋಗ ಲಕ್ಷಣಗಳು ಇರಲಿಲ್ಲ. ಇದೀಗ ವ್ಯಕ್ತಿಯ ಸಂಪರ್ಕದಲ್ಲಿದ್ದ ನಾಲ್ವರಿಗೂ ಆರ್​ಟಿಪಿಸಿಆರ್ ಟೆಸ್ಟ್ ಮಾಡಲಾಗಿದ್ದು, ಅವರಲ್ಲಿ ಯಾರಲ್ಲೂ ಸೋಂಕು ಪತ್ತೆಯಾಗಿಲ್ಲ. ಸೋಂಕಿತ ವ್ಯಕ್ತಿ ಚಿಕಿತ್ಸೆ ಪಡೆದಿದ್ದು, ಇಂದು ಆಸ್ಪತ್ರೆಯಿಂದ ಬಿಡುಗಡೆಯಾಗಲಿದ್ದಾರೆ.

 

Loading

Leave a Reply

Your email address will not be published. Required fields are marked *