ಬೆಂಗಳೂರು: ನಗರದ ಶ್ರೀರಾಂಪುರಂದ ಹರಿಶ್ಚಂದ್ರ ಘಾಟ್ನಲ್ಲಿ ನಡೆಯಲಿರುವ ಅಂತ್ಯ ಸಂಸ್ಕಾರ ಹಿನ್ನೆಲೆಯಲ್ಲಿ ಹರಿಶ್ಚಂದ್ರ ಘಾಟ್ನಲ್ಲಿ ಬಿಬಿಎಂಪಿ ಅಧಿಕಾರಿಗಳು ಸಕಲ ಸಿದ್ದತೆ ಮಾಡುತ್ತಿದ್ದಾರೆ.
15 ಪೌರ ಕಾರ್ಮಿಕರಿಂದ ಕ್ಲಿನಿಂಗ್ ಕಾರ್ಯ ನಡೆಯುತ್ತಿದೆ. ಬರ್ನಿಂಗ್ ಮಾಡುವ ಮೆಷಿನ್ ಮತ್ತು ಕೊಠಡಿಯನ್ನು ಕಾರ್ಮಿಕರು ಪೇಂಟಿಂಗ್ ಮಾಡುತ್ತಿದ್ದಾರೆ.
ಮೃತದೇಹ ಬರ್ನಿಂಗ್ ಮೆಷಿನ್ ಒಳಗೆ ಹೋಗುವ ಸಂದರ್ಭದಲ್ಲಿ ಯಾವುದೇ ಸಮಸ್ಯ ಆಗದಂತೆ ಮುಂಜಾಗ್ರತೆ ವಹಿಸಲಾಗಿದೆ.
ಸ್ಪಂದನಾ ವಿಜಯರಾಘವೇಂದ್ರ ಅವರ ಅಂತ್ಯಕ್ರಿಯೆ ಇಂದು ಸಂಜೆ 4 ಗಂಟೆಗೆ ಶ್ರೀರಾಮಪುರದ ಹರಿಶ್ಚಂದ್ರಘಾಟ್ನಲ್ಲಿ ಅಂತ್ಯಕ್ರಿಯೆ ನಡೆಯಲಿದೆ.