ಬೆಂಗಳೂರು : ರಾಜ್ಯದ 31 ನೇ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರು ಮೇ. 20 ರ ನಾಳೆ ಮಧ್ಯಾಹ್ನ 12.30 ಕ್ಕೆ ಕಂಠೀರ ಕ್ರೀಡಾಂಗಣದಲ್ಲಿ ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ. ರಾಜ್ಯದ ನೂತನ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಗೆ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಶುಭ ಕೋರಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಬಿ.ಎಸ್. ಯಡಿಯೂರಪ್ಪ, ಕಾಂಗ್ರೆಸ್ ಪಕ್ಷದ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗಿ, ರಾಜ್ಯದ ಮುಖ್ಯಮಂತ್ರಿಗಳಾಗಿ ಅಧಿಕಾರ ವಹಿಸಿಕೊಳ್ಳಲಿರುವ ಸಿದ್ದರಾಮಯ್ಯನವರಿಗೆ ಹಾಗೂ ರಾಜ್ಯದ ಉಪಮುಖ್ಯಮಂತ್ರಿಗಳಾಗಿ ಅಧಿಕಾರ ಸ್ವೀಕರಿಸಲಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೂ ಹೃತ್ಪೂರ್ವಕ ಅಭಿನಂದನೆಗಳು ಎಂದು ತಿಳಿಸಿದ್ದಾರೆ.