ಬಹಿರಂಗ ಸಭೆ ಮೂಲಕ ಪ್ರಜೆಗಳಲ್ಲಿ ಮತಯಾಚನೆ ಮಾಡಿದ ಡಿ.ಕೆ. ಶಿವಕುಮಾರ್

ಕರ್ನಾಟಕ ವಿಧಾನಸಭೆ ಚುನಾವಣೆಗೆ ದಿನಗಣನೆ ಶುರುವಾಗಿದೆ. ರಾಜ್ಯದಲ್ಲಿ ಪ್ರಬಲ ಮೂರು ಪಕ್ಷಗಳು ಅಬ್ಬರದ ಪ್ರಚಾರ ನಡೆಸಿವೆ. ಹೂವಿನ ಹಡಗಲಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶ್ರೀ ಪಿ.ಟಿ. ಪರಮೇಶ್ವರ ನಾಯಕ ಪರವಾಗಿ ಕೆಪಿಸಿಸಿ ಅಧ್ಯಕ್ಷರಾದ ಶ್ರೀ ಡಿ.ಕೆ. ಶಿವಕುಮಾರ್ ಅವರು ಬಹಿರಂಗ ಸಭೆ ಮೂಲಕ ಪ್ರಜೆಗಳಲ್ಲಿ ಮತಯಾಚನೆ ಮಾಡಿದರು.

ಈ ಕಾರ್ಯಕ್ರಮದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳು ಶ್ರೀ ಜೆ.ಎಸ್. ಆಂಜನೇಯುಲು ಅವರು, ವಿಜಯನಗರ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಶ್ರೀ ಸಿರಾಜ್ ಶೇಖ್ ಅವರು ಹಾಗೂ ಶ್ರೀ ಶಿವಯೋಗಿ ಅವರು, ಬಳ್ಳಾರಿ ನಗರ ಜಿಲ್ಲಾ ಕಾಂಗ್ರೆಸ್ ಸಮಿತಿ ಕಾರ್ಯಾಧ್ಯಕ್ಷರಾದ ಶ್ರೀ ಬೋಯಪಾಟಿ ವಿಷ್ಣುವರ್ಧನ್ ಅವರು, ಹಾಗೂ ಬ್ರೂಸ್ ಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಕೆ ಶ್ರೀನಿವಾಸುಲು, ಸ್ಥಳೀಯ ನಾಯಕರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Loading

Leave a Reply

Your email address will not be published. Required fields are marked *