ಭಾರೀ ಮಳೆ ಹಿನ್ನೆಲೆ: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆ ಹಿನ್ನೆಲೆಯಲ್ಲಿ ಜಿಲ್ಲೆಯ 5 ತಾಲೂಕಿನ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆಯಾಗಿದೆ.
ಮಂಗಳೂರು, ಉಳ್ಳಾಲ, ಮುಲ್ಕಿ, ಬಂಟ್ವಾಳ ಹಾಗೂ ಮೂಡಬಿದಿರೆ ತಾಲೂಕಿಗೆ ರಜೆ ಘೋಷಣೆ ಮಾಡಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ. ಉಳಿದೆಡೆ ತಹಶೀಲ್ದಾರ್ ಗಳಿಗೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವ ಅಧಿಕಾರ ನೀಡಿದ್ದಾರೆ.
ಮಳೆ ಪರಿಸ್ಥಿತಿ ನೋಡಿಕೊಂಡು ಆಯಾ ತಾಲೂಕು ತಹಶೀಲ್ದಾರ್ ಗಳು ರಜೆ ಘೋಷಿಸುವಂತೆ ಸೂಚನೆ ನೀಡಿದ್ದಾರೆ. ಸದ್ಯ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆಯು ದ.ಕ ಜಿಲ್ಲೆಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ.

Loading

Leave a Reply

Your email address will not be published. Required fields are marked *