ಶಿವಮೊಗ್ಗ: ಶಿವಮೊಗ್ಗ: ನಗರದಲ್ಲಿ ಏಕಕಾಲಕ್ಕೆ 3 ಕಡೆಗಳಲ್ಲಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಡಿಸಿಸಿ ಬ್ಯಾಂಕ್ ಅಧ್ಯಕ್ಷರಿಗೆ ಸೇರಿದ ಮನೆಗಳ ಮೇಲೆ ಇಡಿ ದಾಳಿ ನಡೆಸಿದೆ. ತೀರ್ಥಹಳ್ಳಿಯ ಬೆಟ್ಟಮಕ್ಕಿಯಲ್ಲಿರುವ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್ಎಂ ಮಂಜುನಾಥ್ ಅವರ ನಿವಾಸದ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಮುಂಜಾನೆಯೇ 2 ಕಾರಿನಲ್ಲಿ ಆಗಮಿಸಿದ ಅಧಿಕಾರಿಗಳು ಮನೆಗೆ ಬೀಗ ಹಾಕಿದ್ದ ಹಿನ್ನೆಲೆ ಹೊರಗಡೆ ಕಾದು ಕುಳಿತಿದ್ದಾರೆ. ಮಂಜುನಾಥ್ ಅವರಿಗೆ ಸೇರಿದ ಒಟ್ಟು 3 ನಿವಾಸದ ಮೇಲೆ ದಾಳಿ ನಡೆಸಲಾಗಿದೆ. ಬೆಟ್ಟಮಕ್ಕಿಯಲ್ಲಿರುವ ನಿವಾಸ, ಶಿವಮೊಗ್ಗದ ಶರಾವತಿ ನಗರದಲ್ಲಿರುವ ನಿವಾಸ ಹಾಗೂ ಕರಿಕುಚ್ಚಿ ಗ್ರಾಮದ ನಿವಾಸದ ಮೇಲೂ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ದಾಳಿ ನಡೆಸಿರುವ ಅಧಿಕಾರಿಗಳು ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.