DCM ಡಿಕೆಶಿ ಭೇಟಿಯಾದ ಅಶ್ವಿನಿ ಪುನೀತ್ ರಾಜಕುಮಾರ್

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ಇಂದು ಅಶ್ವಿನಿ ಪುನೀತ್ ರಾಜಕುಮಾರ್ ಅವರು ಭೇಟಿ ಮಾಡಿದ್ದಾರೆ. ಬೆಂಗಳೂರಿನ ಸದಾಶಿವ ನಗರದ ಡಿಕೆಶಿ ನಿವಾಸಕ್ಕೆ ಅಶ್ವಿನಿ ಪುನೀತ್ ರಾಜ್‌ಕುಮಾರ್‌ ಅವರ ಜೊತೆ ರಾಘವೇಂದ್ರ ರಾಜ್ ಕುಮಾರ್ ಕೂಡ ಭೇಟಿ ನೀಡಿದರು.

ಈ ವೇಳೆ ರಾಜ್ಯದ ನೂತನ ಉಪಮುಖ್ಯಮಂತ್ರಿಯಾಗಿರುವ ಡಿಕೆಶಿ ಅವರಿಗೆ ಅಶ್ವಿನಿ ಮತ್ತು ರಾಘಣ್ಣ ಶುಭ ಕೋರಿದ್ದಾರೆ. ಈ ಬಾರಿಯ 2023 ರ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್​ ಅಭ್ಯರ್ಥಿಗಳ ಪರವಾಗಿ ಶಿವರಾಜ್ ಕುಮಾರ್ ದಂಪತಿ ಪ್ರಚಾರ ಮಾಡಿದ್ದರು.

ಅದರಂತೆ ರಾಜ್ಯದಲ್ಲಿ ಬಹು ಮತಗಳ ಅಂತರದಿಂದ ಕಾಂಗ್ರೆಸ್ ಗೆಲುವು ಸಾಧಿಸಿರುವ ಹಿನ್ನೆಲೆ ಇಂದು ಅಶ್ವಿನಿ ಪುನೀತ್​ ರಾಜ್​ಕುಮಾರ್​ ಅವರು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್​ ಅವರನ್ನು ಭೇಟಿ ಮಾಡಿದ್ದಾರೆ. ಡಿಸಿಎಂ ಅವರ ನಿವಾಸಕ್ಕೆ ಅಶ್ವಿನಿ ಎಂಟ್ರಿ ನೀಡಿದ ವಿಡಿಯೋ ಕೂಡ ಲಭ್ಯವಾಗಿದೆ.

Loading

Leave a Reply

Your email address will not be published. Required fields are marked *