ಬೆಂಗಳೂರು: ಲೋಕಸಭೆ ಚುನಾವಣೆ ಬಗ್ಗೆ ದೆಹಲಿಯಲ್ಲಿ ಸಭೆ ನಡೆಯುತ್ತಿದೆ. ನಮ್ಮ ಗ್ಯಾರಂಟಿ ಯೋಜನೆಗಳು ಜನರಿಗೆ ತಲುಪುತ್ತಿದೆಯಾ? ಗ್ಯಾರಂಟಿ ಯೋಜನೆಗಳ ಬಗ್ಗೆಯೂ ಚರ್ಚೆ ಮಾಡ್ತೇವೆ. ಸಭೆಗೆ ಹಿರಿಯ ನಾಯಕರು, ಸಂಸದರು, ಶಾಸಕರಿಗೂ ಆಹ್ವಾನಿಸಲಾಗಿದೆ. ಮೂರು ಹಂತದಲ್ಲಿ ಚರ್ಚೆಯಾಗಲಿದೆ. ದೆಹಲಿ ಭೇಟಿ ವೇಳೆ ಕೇಂದ್ರ ಸಚಿವರನ್ನೂ ಭೇಟಿ ಮಾಡುತ್ತೇವೆ ಎಂದು ಬೆಂಗಳೂರಿನಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು.