ಗದಗ: ವೈದ್ಯರ ನಿರ್ಲಕ್ಷ್ಯದಿಂದ ಬಾಣಂತಿ, ಅವಳಿ ಕಂದಮ್ಮಗಳ ಮೃತಪಟ್ಟಿದ್ದಾರೆಂದು ಆರೋಪಿಸಿ ಮೃತ ಸಂಬಂಧಿಕರು ಪ್ರತಿಭಟನೆ ನಡೆಸಿದ ಘಟನೆ ಗಜೇಂದ್ರಗಡ ಪಟ್ಟಣದ ಕಾರೊಡಗಿಮಠ ಆಸ್ಪತ್ರೆ ಎದುರು ನಡೆದಿದೆ. ಬಾಣಂತಿ ನಂದಿನಿ, ಎರಡು ಅವಳಿ ಮಕ್ಕಳು ಸಾವು. ಕೊಪ್ಪಳ ಜಿಲ್ಲೆಯ ಕುಕನೂರ ತಾಲೂಕಿನ ವಿರುಪಾಪೂರ ಗ್ರಾಮದವರಾಗಿರುವ ಮಹಿಳೆ. ಫೆಬ್ರುವರಿ 2ರಂದು ಸಿಜೇರಿಯನ್ ಮಾಡಿ ಹೆರಿಗೆ ಮಾಡಿಸಿದ್ದ ವೈದ್ಯರು. ಎರಡು ಅವಳಿ ಮಕ್ಕಳಿಗೆ ಜನ್ಮ ನೀಡಿದ್ದ ತಾಯಿ.
ಆದರೆ ಸಿಜೆರಿಯನ್ ಮಾಡಿದ್ದರಿಂದ ತೀವ್ರ ರಕ್ತಸ್ರಾವವಾಗಿದೆ. ಮೊದಲೇ ರಕ್ತದ ವ್ಯವಸ್ಥೆ ಮಾಡದೇ ನಿರ್ಲಕ್ಷ್ಯದಿಂದ ಸಿಜೇರಿಯನ್ ಮಾಡಿದ್ದರಿಂದಲೇ ಹೆರಿಗೆ ಬಳಿಕ ತೀವ್ರ ರಕ್ತಸ್ರಾವದಿಂದ ಬಾಣಂತಿಗೆ ಲೋ ಬಿಪಿಯಾಗಿದೆ. ಬಾಗಲಕೋಟೆ ಜಿಲ್ಲೆ ಬದಾಮಿ ಖಾಸಗಿ ಆಸ್ಪತ್ರೆಗೆ ರವಾನೆ ಮಾಡಲಾಗಿತ್ತು.
ಆದರೆ ಚಿಕಿತ್ಸೆ ಫಲಿಸದೇ ಇಂದು ಬಾಣಂತಿ ಮೃತಪಟ್ಟಿದ್ದಾಳೆ. ಅವಳಿ ಮಕ್ಕಳು ಸಹ ಮೃತಪಟ್ಟಿವೆ. ಬಾಣಂತಿ ನಂದಿನಿ ಅವಳಿ ಮಕ್ಕಳ ಸಾವಿಗೆ ವೈದ್ಯರ ನಿರ್ಲಕ್ಷ್ಯವೇ ಕಾರಣವೆಂದು ಕಾರೊಡಗಿಮಠ ಆಸ್ಪತ್ರೆ ವೈದ್ಯರ ವಿರುದ್ಧ ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.